ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಜಾಗೇರಿ ಭರಚುಕ್ಕಿ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಬೇಟೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಮುತ್ತತಿ ಗ್ರಾಮದ ನಿವಾಸಿ ಸಿದ್ದರಾಜು, ಸುಂದರ್ ಬಂಧಿತರು. ಇವರು ಕಾಡು ಪ್ರಾಣಿಗಳ ಬೇಟೆಗಾಗಿ ಸಂಚು ರೂಪಿಸಲು ಕಾಡಿನೊಳಗೆ ತೆರಳುವಾಗ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದು, ಆರೋಪಿಗಳ ಬಳಿ 5 ಉರುಳು ಪತ್ತೆಯಗಿದೆ. ಅರಣ್ಯಾಧಿಕಾರಿಗಳ ವಿಚಾರಣೆ ವೇಳೆ ಕಾಡು ಪ್ರಾಣಿಗಳ ಬೇಟೆಗೆ ಉರುಳು ಹಾಕಲು ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅರಣ್ಯಾಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.