ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ಜಯಂತಿ ಆಚರಿಸಲಾಯಿತು. ಎಂ.ರಾಮಚಂದ್ರ, ಡಾ.ನವೀನ್‌ಮೌರ್ಯ, ಕುಲಗಾಣ ಶಾಂತಮೂರ್ತಿ, ಬಾಲಸುಬ್ರಹ್ಮಣ್ಯಂ, ಮೂಡ್ನಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ, ಕಾಡಹಳ್ಳಿ ಕುಮಾರ್, ಶಿವರಾಜ್ ಇತರರಿದ್ದರು.
- ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರು ಅಭಿಪ್ರಾಯ
- ಡಾ.ಬಾಬು ಜಗಜೀವನ್‌ರಾಮ್ ಅವರ 119ನೇ ಜನ್ಮದಿನಾಚರಣೆ
- ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಆಯೋಜನೆ
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ಜಯಂತಿ ಆಚರಿಸಲಾಯಿತು. ಎಂ.ರಾಮಚಂದ್ರ, ಡಾ.ನವೀನ್‌ಮೌರ್ಯ, ಕುಲಗಾಣ ಶಾಂತಮೂರ್ತಿ, ಬಾಲಸುಬ್ರಹ್ಮಣ್ಯಂ, ಮೂಡ್ನಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ, ಕಾಡಹಳ್ಳಿ ಕುಮಾರ್, ಶಿವರಾಜ್ ಇತರರಿದ್ದರು.
ಚಾಮರಾಜನಗರ: ಡಾ.ಬಾಬು ಜಗಜೀವನ್ ರಾಮ್ ಅವರು ಸೃಷ್ಟಿಸಿದ ಹಸಿರು ಕ್ರಾಂತಿಯಿಂದ ಇಂದಿಗೂ ದೇಶದಲ್ಲಿ ಆಹಾರದ ಕೊರತೆ ಎದುರಾಗಿಲ್ಲ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಎಸ್ಸಿ ಮೋರ್ಚಾ ವತಿಯಿಂದ ಭಾನುವಾರ ಆಯೋಜಿಸಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್‌ರಾಮ್ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರ ಕೃಷಿ ಸಚಿವರಾಗಿದ್ದ ಡಾ.ಬಾಬು ಜಗಜೀವನ್‌ರಾಮ್ ಅವರು ಹಸಿರುಕ್ರಾಂತಿಯ ಮೂಲಕ ದೇಶಕ್ಕೆ ಆಹಾರ ಭದ್ರತೆಯನ್ನು ಒದಗಿಸಿಕೊಟ್ಟಿದ್ದಾರೆ. ಅವರು ಉಪಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಚಾಮರಾಜನಗರಕ್ಕೂ ಭೇಟಿ ನೀಡಿದ್ದರು. ಅವರು ರಕ್ಷಣಾ ಸಚಿವರಾಗಿದ್ದ ತೆಗೆದುಕೊಂಡ ನಿರ್ಧಾರಗಳು ಇತಿಹಾಸ ಪುಟದಲ್ಲಿ ದಾಖಲಾಗಿದೆ ಎಂದರು.
ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಡಾ.ನವೀನ್‌ಮೌರ್ಯ ಮಾತನಾಡಿ, ಡಾ.ಬಾಬು ಜಗಜೀವನ್ ರಾಮ್ ಅವರು ಸಮಾಜದ ಕಣ್ಣಾಗಿ ಶೋಷಿತರ ಪರ ಹೋರಾಟ ನಡೆಸಿದರು. ಅವರೊಬ್ಬ ಸ್ವಾಭಿಮಾನಿ ರಾಜಕಾರಣಿಯಾಗಿದ್ದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚುಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಬಾಲಸುಬ್ರಹ್ಮಣ್ಯಂ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ನಗರ ಮಂಡಲ ಅಧ್ಯಕ್ಷ ಶಿವರಾಜ್, ಜಿ.ಪಂ ಮಾಜಿ ಸದಸ್ಯ ಬಾಲರಾಜ್, ಶಿವಣ್ಣ, ನಟರಾಜ್, ಮುಖಂಡ ಚಂದ್ರಶೇಖರ್, ರಾಮಸಮುದ್ರ ಶಿವಣ್ಣ, ಮೂಡಹಳ್ಳಿ ಮೂರ್ತಿ, ವೇಣುಗೋಪಾಲ್, ಆರ್.ವಿ.ಮಹಾದೇವಸ್ವಾಮಿ, ಆರ್.ಪುಟ್ಟಮಲ್ಲಪ್ಪ, ನಿಂಗಯ್ಯ, ಪರಶಿವಮೂರ್ತಿ, ರಾಜಪ್ಪ, ಶಿವಕುಮಾರ್ ಇತರರು ಹಾಜರಿದ್ದರು.