ಚಾಮರಾಜನಗರ ತಾಲೂಕಿನ ಕೆ.ಕೆ ಹುಂಡಿ ಗ್ರಾಮದಲ್ಲಿ ನಿರ್ಮಿಸಲಾಗುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಎಸ್‌ಪಿಕೆ ಉಮೇಶ್, ನಿವೃತ್ತ ಬಿಇಒ ಸೋಮಣ್ಣೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಕುಮಾರ್, ಮಹದೇವಸ್ವಾಮಿ, ಕೆ.ಕೆ ಹುಂಡಿ ನಾಗರಾಜು ಇತರರು ಇದ್ದರು. 
ಚಾಮರಾಜನಗರ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಕಿರಣ್ ಮಾದರಹಳ್ಳಿ

ಪ್ರಮುಖ ಮುಖ್ಯಾಂಶಗಳು

  • ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಅನುದಾನ ಯೋಜನೆ
  • 2.40 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವ ರಸ್ತೆ
ಚಾಮರಾಜನಗರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ 2.40 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಅನುದಾನ ಯೋಜನೆಯಡಿ ಯಡಿಯೂರು ಗ್ರಾಮಕ್ಕೆ 50 ಲಕ್ಷ ರೂ., ಯಲಕ್ಕೂರು, ಕರಡಿಮೋಳೆ, ಸಪ್ಪಯ್ಯನಪುರ ಸಂಪರ್ಕ ರಸ್ತೆಗೆ 50 ಲಕ್ಷ ರೂ., ಗುಂಡ್ಲುಪೇಟೆ ಮುಖ್ಯರಸ್ತೆಯಿಂದ ಮಲ್ಲಯ್ಯನಪುರ ಆರ್‌ಟಿಒ ಕಚೇರಿ ಸಂಪರ್ಕ ರಸ್ತೆಗೆ 70 ಲಕ್ಷ ರೂ., ಗುಂಡ್ಲುಪೇಟೆ ಮುಖ್ಯರಸ್ತೆಯಿಂದ ಕಡುವಿನಕಟ್ಟೆಹುಂಡಿ ಸಂಪರ್ಕ ರಸ್ತೆ ಅಭಿವೃದ್ಧಿಗೆ 70 ಲಕ್ಷ ರೂ. ಮಂಜೂರಾಗಿದೆ. ಗ್ರಾಮ ಸಂಪರ್ಕ ರಸ್ತೆಗಳು ಗ್ರಾಮಗಳ ಅಭಿವೃದ್ಧಿಯ ಸಂಕೇತವಾಗಿವೆ. ಸಂಬಂಧಪಟ್ಟ ಕಾಮಗಾರಿ ನಿರ್ವಹಣೆ ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ, ಈ ಭಾಗದ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.
ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ ಚರಂಡಿ, ಸಮುದಾಯ ಭವನ ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಸರ್ಕಾರ ಮಂಜೂರು ಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಮುಖಂಡರಾದ ಎಸ್‌ಪಿಕೆ ಉಮೇಶ್, ನಿವೃತ್ತ ಬಿಇಒ ಸೋಮಣ್ಣೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಕುಮಾರ್, ಮಹದೇವಸ್ವಾಮಿ, ಕೆ.ಕೆ ಹುಂಡಿ ನಾಗರಾಜು, ಬಸಪ್ಪನಪಾಳ್ಯದ ನಟರಾಜು, ಸುಬ್ಬೇಗೌಡ, ಪ್ರಕಾಶ್, ಶಿವಣ್ಣ, ಮಂಜು, ಕೆಆರ್‌ಐಡಿಯಲ್ ಇಂಜಿನಿಯರ್ ಅರುಣ್, ಮಹದೇವಪ್ರಸಾದ್, ಮುಖಂಡರು, ಗ್ರಾಮಸ್ಥರು ಹಾಜರಿದ್ದರು.