ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗೇಟ್ ಬಳಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿರುವುದು .
ಯಳಂದೂರು: ತಾಲೂಕಿನ ಮೆಲ್ಲಹಳ್ಳಿ ಗೇಟ್ ಬಳಿಯಲ್ಲಿ ಶುಕ್ರವಾರ ಸಂಜೆ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ.
ಹೊನ್ನೂರು ಗ್ರಾಮದ ವಿಶ್ವನಾಥ (68) ಗಾಯಗೊಂಡವರು. ರಾಷ್ಟ್ರೀಯ ಹೆದ್ದಾರಿ 948 ರ ಮೆಲ್ಲಹಳ್ಳಿ ಗೇಟ್ ವೃತ್ತದಲ್ಲಿ ಯಳಂದೂರು ಕಡೆಯಿಂದ ಬರುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರನ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ಘಟನೆ ಬಳಿಕ ಸ್ಥಳೀಯರು ತುರ್ತು ವಾಹನ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಸಂಬಂಧ ಯಳಂದೂರು ಠಾಣೆ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.