ಚಾಮರಾಜನಗರದ ಜೆಎಸ್‌ಎಸ್ ಆಸ್ಪತ್ರೆ ರಸ್ತೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರು ಭೇಟಿ ಮಾಡಿ ಮಾತನಾಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ರೈತ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮತ್ತು ಇತರರು ಇದ್ದರು.
- ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಒತ್ತಾಯ
- ಬಿಜೆಪಿ ಕಚೇರಿಯಲ್ಲಿ ಎಸ್‌ಐಆರ್ ಪರಿಶೀಲನಾ ಸಭೆ ನಡೆಸಿದ ಅಶೋಕ್
ಚಾಮರಾಜನಗರ: ಕಳೆದ ವರ್ಷ ರಾಜ್ಯ ಸರ್ಕಾರ ಆಯೋಜನೆ ಮಾಡಲು ಹಿಂದೇಟು ಹಾಕಿದ್ದ ಚಾಮರಾಜನಗರ ದಸರಾ ಮಹೋತ್ಸವವನ್ನು ಈ ಸಲ ಹಮ್ಮಿಕೊಳ್ಳಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಹಿಂದಿನ ಸಲ ಜಿಲ್ಲಾ ದಸರಾ ಆಯೋಜನೆ ಮಾಡುವುದನ್ನು ಸರ್ಕಾರ ಕೈಬಿಟ್ಟಿತ್ತು. ಆದರೆ ಈ ಬಾರಿ ತಪ್ಪದೆ ದಸರಾ ಮಾಡಬೇಕೆಂದು ಬಿಜೆಪಿ ಒತ್ತಾಯ ಮಾಡುತ್ತದೆ. ಬಿಜೆಪಿ ಅಧಿಕಾರವಧಿಯಲ್ಲಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸು ಯೋಜನೆಯನ್ನು ಜಾರಿಗೆ ತರಲಾಗಿತ್ತು. ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು ತುಂಬಿಸುವಲ್ಲಿ ವಿಲವಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಜಿಲ್ಲೆಯ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ಹಳ್ಳ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಸಂಚಾರ ಮಾಡುವುದು ಬಹಳ ಕಷ್ಟವಾಗಿದೆ. ಇದು ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ ಎನ್ನುವುದನ್ನು ತೋರಿಸುತ್ತದೆ. ನಾವು ಗ್ಯಾರಂಟಿ ಯೋಜನೆಗಳ ವಿರೋಧಿಗಳಲ್ಲ. ಆದರೆ ಸಮೀಕ್ಷೆ ಮಾಡಿ ಗ್ಯಾರಂಟಿ ಯೋಜನೆಗೆ ರೂಪಿಸಿ, ಜಾರಿಗೊಳಿಸದೆ ಇರುವುದು ರಾಜ್ಯವನ್ನು ದಿವಾಳಿಯತ್ತ ಕರೆದೊಯ್ಯುತ್ತಿದೆ.
ಬರದ ನಿರ್ವಹಣೆಗೆ ಜಿಲ್ಲಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಯತೀಂದ್ರ ಸಿದ್ದರಾಮಯ್ಯ ಜಿಲ್ಲೆಗೆ ಒಂದು ಬಾರಿಯೂ ಭೇಟಿ ನೀಡಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೋದಲ್ಲೆಲ್ಲ ಕೇವಲ ಪೋಟೋಗಳನ್ನು ತೆಗೆಸಿಕೊಳ್ಳುತ್ತಾ ಇದ್ದಾರೆ. ಇದು ಸಿಎಂಗೆ ಚಾಳಿಯಾಗಿ ಹೋಗಿದೆ ಎಂದರು. ಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್, ಕಾರ್ಯದರ್ಶಿ ಡಾ.ಲಕ್ಷ್ಮೀ ಅಶ್ವಿನ್‌ಗೌಡ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್, ಮಾಜಿ ಅಧ್ಯಕ್ಷ ನಾರಾಯಣ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ವಕ್ತಾರ ಮನೋಜ್ ಪಟೇಲ್ ಇದ್ದರು.
ಜಿಲ್ಲೆಯಲ್ಲಿ ಎಸ್‌ಐಆರ್ ಅನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯನಿರ್ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸೂಚನೆ ನೀಡಿದರು. ನಗರದ ಕುಲುಮೆ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಸೋಮವಾರ ಭೇಟಿ ಆಯೋಜಿಸಿದ್ದ ಎಸ್‌ಐಆರ್ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿಯ ಕ್ಷೇತ್ರ ಮಟ್ಟದ ಸಂಯೋಜಕರು-1 ಮತ್ತು 2ಗಳು ಎಸ್‌ಐಆರ್ ಅನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್‌ಐಆರ್‌ಗಳು ನೊಂದಣಿಯ ಬಗ್ಗೆ ಪರಿಶೀಲನೆ ಮಾಡಬೇಕು. ಈ ವಿಚಾರದಲ್ಲಿ ಏನಾದರೂ ಸಮಸ್ಯೆಗಳಾಗುತ್ತಿದ್ದರೆ ತಿಳಿಸಬೇಕು. ಎಸ್‌ಐಆರ್ ಮೇಲೆ ಜಿಲ್ಲೆಯಲ್ಲಿ ಕಾಂಗ್ರೆಸ್ ಬೀರಬಹುದಾದ ಪರಿಣಾಮಗಳನ್ನು ತಿಳಿದುಕೊಂಡು ಪಾರದರ್ಶಕವಾಗಿ ಎಸ್‌ಐಆರ್ ನಡೆಯುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಮಾಜಿ ಶಾಸಕ ಎಸ್.ಬಾಲರಾಜು, ವಿಭಾಗ ಪ್ರಭಾರಿ ಮರಳಾಪುರ ಸ್ವಾಮಿ, ಸಹಪ್ರಭಾರಿ ಇ.ಸಿ.ಲಿಂಗರಾಜು, ಮುಖಂಡರಾದ ನೂರೊಂದು ಶೆಟ್ಟಿ, ಆರ್.ಸುಂದರ್, ಹನೂರು ವೆಂಕಟೇಶ್, ಪಿ.ವೃಷಭೇಂದ್ರಪ್ಪ, ವೈ.ಸಿ.ನಾಗೇಂದ್ರ, ಸಿ.ಎನ್.ಬಾಲರಾಜು, ಕೋಡಿಉಗನೆ ಮಂಜು, ಹೊನ್ನೂರು ಮಹದೇಸ್ವಾಮಿ ಅರಕಲವಾಡಿ ನಾಗೇಂದ್ರ, ಸುರೇಶ್, ಸೂರ್ಯಕುಮಾರ್, ಕಾಡಳ್ಳಿ ಕುಮಾರ್ ಇತರರು ಪಾಲ್ಗೊಂಡಿದ್ದರು.
ಜಿಲ್ಲೆಯಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯ ಸರ್ಕಾರ ಬರ ೋಷಣೆ ಮಾಡಲು ಒತ್ತಾಯ ಮಾಡಬೇಕೆಂದು ರಾಜ್ಯ ಬೆಳೆಗಾರರ ಸಂಘದ ಸದಸ್ಯರು ನಗರದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಬಳಿ ಮನವಿ ಮಾಡಿದರು. ನಗರದ ಪ್ರೆಸ್‌ಕ್ಲಬ್‌ನಿಂದ ಬಿಜೆಪಿ ಕಚೇರಿಗೆ ತೆರಳುತ್ತಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ಜೆಎಸ್‌ಎಸ್ ಆಸ್ಪತ್ರೆ ರಸ್ತೆಯಲ್ಲಿ ರೈತರು ಭೇಟಿ ಮಾಡಿದರು. ಈ ವೇಳ ಕಾರಿನಿಂದ ಕೆಳಗಿದ ಆರ್.ಅಶೋಕ್ ರೈತರೊಂದಿಗೆ ಮಾತನಾಡಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಜಿಲ್ಲೆಯಲ್ಲಿ ಬರ ೋಷಣೆ ಮಾಡಬೇಕು. ರೈತರು ಬೆಳೆ ಸಾಲ ಮನ್ನ ಮಾಡಬೇಕೆಂದು ಪ್ರತಿಭಟನೆಗಳು ನಡೆಯುತ್ತಿವೆ. ಈ ಸ್ಥಳಗಳಿಗೆ ನೀವು ಭೇಟಿ ನೀಡಬೇಕು. ಜಿಲ್ಲೆಯಲ್ಲಿ ಪರಿಶೀಲನೆ ಮಾಡಬೇಕು. ಕೇಂದ್ರದ ಬರ ಪರಿಹಾರ ನಿಯೋಗವನ್ನು ರಾಜ್ಯಕ್ಕೆ ಕರೆದುಕೊಂಡು ಬರಬೇಕು. ರಾಜ್ಯ ಸರ್ಕಾರ ೋಷಣೆ ಮಾಡಲಿ ಎನ್ನುವ ಬದಲು ಬಿಜೆಪಿ ಸಂಸದರು ಇದರ ಬಗ್ಗೆ ಧ್ವನಿ ಎತ್ತಬೇಕು. ಇಲ್ಲದಿದ್ದರೆ ಆಡಳಿತ ಮತ್ತು ವಿರೋಧ ಪಕ್ಷಗಳ ವಿರುದ್ಧ ಧರಣಿ ಮಾಡಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಮುಂದಿನ ಅಧಿವೇಶನದಲ್ಲಿ ರೈತರ ಪರ ಧ್ವನಿ ಎತ್ತಲಾಗುವುದು. ಬರ ಪರಿಸ್ಥಿತಿಯನ್ನು ತಿಳಿಯಲು ನಾನೂ ಸಹ ರೈತರ ಜಮೀನಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕಾರ್ಯದರ್ಶಿ ಮಲೆಯೂರು ಮಹೇಂದ್ರ, ತಾಲೂಕು ಅಧ್ಯಕ್ಷ ಸತೀಶ್, ಚನ್ನಪ್ಪನಪುರ ಮಲ್ಲೇಶ್, ರಾಜು, ಪ್ರಭುಸ್ವಾಮಿ ಇತರರು ಇದ್ದರು.