ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಬ್ಬನಾಯಕ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು. ಶಾಸಕ ಸಿ.ಪುಟ್ಟರಂಗಶೆಟ್ಟಿ. ಕಾಡ ಅಧ್ಯಕ್ಷ ಪಿ.ಮರಿಸ್ವಾಮಿ, ಎಸ್‌ಪಿಕೆ ಉಮೇಶ್,ಅರಕಲವಾಡಿ ಸೋಮನಾಯಕ,ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ರಾಜಪ್ಪ, ಮಹೇಶ್ ಕುದರ್ ಇನ್ನಿತರರಿದ್ದರು.  
ಚಾಮರಾಜನಗರ

ಬಿಜೆಪಿ ಮುಖಂಡ ಸುಬ್ಬನಾಯಕ ಕಾಂಗ್ರೆಸ್ ಸೇರ್ಪಡೆ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿ.ಪುಟ್ಟರಂಗಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
  • ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಸ್ವಾಗತ
  • ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿವೃದ್ಧಿ ಮೆಚ್ಚಿ ಸೇರ್ಪಡೆ
ಚಾಮರಾಜನಗರ: ತಾಲೂಕಿನ ತಮ್ಮಡಹಳ್ಳಿ ಗ್ರಾಮದ ಹಿರಿಯ ಬಿಜೆಪಿ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುಬ್ಬನಾಯಕ ಮತ್ತು ಬೆಂಬಲಿಗರು ಗುರುವಾರ ಬಿಜೆಪಿ ತೊರೆದು ಶಾಸಕ ಸಿ.ಪುಟ್ಟರಂಗಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಅವರು ಸುಬ್ಬನಾಯಕ, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್‌ನಾಯಕ, ತಾ.ಪಂ. ಮಾಜಿ ಸದಸ್ಯ ಶಿವಪುರ ನಂಜುಂಡೇಗೌಡ, ಮುಖಂಡರಾದ ಮಂಜುನಾಥ್ ಬೆಳ್ಳಶೆಟ್ಟಿ, ಚಿಕ್ಕಂಗಶೆಟ್ಟಿ ಸೇರಿದಂತೆ ಅನೇಕ ಮುಖಂಡರನ್ನು ಪಕ್ಷದ ಶಾಲು ಹಾಕಿ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ತಮ್ಮಡಹಳ್ಳಿ ಗ್ರಾಮದಲ್ಲಿ ನಾಯಕ ಸಮುದಾಯದವರು ಹೆಚ್ಚು ವಾಸಿಸುತ್ತಿರುವುದರಿಂದ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ವಾಲ್ಮೀಕ ಭವನ ನಿರ್ಮಾರ್ಣಕ್ಕೆ ಅನುದಾನ ನೀಡಿದ್ದೇನೆ. ಅದೇ ರೀತಿ ನಾಯಕ ಜನಾಂಗದ ಮುಖ್ಯ ರಸ್ತೆಯನ್ನು ಸಿಮೆಂಟ್ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ 80 ಲಕ್ಷ ರೂ. ನೀಡಿದ್ದು, ತಮ್ಮಡಹಳ್ಳಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿಸಲು ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲು ನಿಮ್ಮೆಲ್ಲರ ಸಹಕಾರ ಮುಖ್ಯವಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಸುಬ್ಬನಾಯಕ ಮಾತನಾಡಿ, ಕಳೆದ 20 ವರ್ಷಗಳಿಂದ ಬಿಜೆಪಿಯಿಂದ ನಮ್ಮ ಗ್ರಾಮಕ್ಕೆ ಯಾವುದೇ ಅಭಿವೃದ್ದಿಯಾಗಿಲ್ಲ. ಈಗ ಶಾಸಕರು ನಮ್ಮ ಗ್ರಾಮದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಅವರ ಜನಪರ, ಸರಳ ವ್ಯಕ್ತಿತ್ವ ವನ್ನು ಮೆಚ್ಚಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಕನಿಷ್ಟ ಯೋಜನೆಗಳ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್‌ಪಿಕೆ ಉಮೇಶ್, ಜಿ.ಪಂ.ಮಾಜಿ ಸದಸ್ಯ ಅರಕಲವಾಡಿ ಸೋಮನಾಯಕ, ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ನಗರಸಭಾ ಮಾಜಿ ಸದಸ್ಯ ರಾಜಪ್ಪ, ಮಹೇಶ್ ಕುದರ್, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿ ಖಾನ್, ಅಯೂಬ್ ಖಾನ್, ಗ್ರಾ.ಪಂ. ಮಾಜಿ ಅಧ್ಯಕ್ಷ ಪಿ.ಶೇಖರಪ್ಪ, ಮಾಜಿ ಉಪಾಧ್ಯಕ್ಷ ಗುರುಮಲ್ಲಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಎಂ.ಶಿವಸ್ವಾಮಿ, ಗ್ಯಾರಂಟಿ ಯೋಜನೆಯ ಸಮಿತಿಯ ಸದಸ್ಯರಾದ ಚಿನ್ನಸ್ವಾಮಿ, ಆರ್.ರಾಜು, ಉಡಿಗಾಲ ನಂಜಪ್ಪ, ಕೊಂಗಳ್ಳಪ್ಪ, ಯು.ಪಿ. ಮಹದೇವಸ್ವಾಮಿ, ಸಾಗಡೆಗ್ರಾ.ಪಂ. ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಗುರುಬಸಪ್ಪ, ಆರ್. ಪರುಷೋತ್ತಮ್, ಹೊಸಹಳ್ಳಿ ಮಧುಸೂದನ್ ಇನ್ನಿತರರು ಹಾಜರಿದ್ದರು.