ಭಾರತವು ಬಲಿಷ್ಠ ಶಕ್ತಿಯಾಗಿ ಹೊರಹೊಮ್ಮುತ್ತಿದೆ * ಸಂಸದ ಕೋಟ ಶ್ರೀನಿವಾಸ ಪೂಜಾರಿ ಶ್ಲಾಘನೆ * ಪ್ರಶಿಕ್ಷಣ ಅಭಿಯಾನಕ್ಕೆ ಚಾಲನೆ ವಿಜಯವಾಣಿ ಸುದ್ದಿಜಾಲ ಯಳಂದೂರು ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತವು ವಿಶ್ವದಲ್ಲೇ ಅತ್ಯಂತ ಬಲಿಷ್ಠ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಜೆಎಸ್‌ಎಸ್ ಆಶ್ರಮದಲ್ಲಿ ಸೋಮವಾರ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ-2026ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಇಂದು ವಿಶ್ವದ ದೊಡ್ಡ ಪಕ್ಷಗಳಲ್ಲಿ ಒಂದಾಗಿದೆ. 2028ರಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಇದನ್ನು ಸಹಿಸದ ದೇಶದ ಕೆಲವರು ಇಲ್ಲ ಸಲ್ಲದ ಆರೋಪಗಳಲ್ಲಿ ಕಾಲಾಹರಣ ಮಾಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿಯೂ ಒಂದಾಗಿದೆ. ಇದೊಂದು ದೇಶ ದ್ರೋಹಿ ಚಟುವಟಿಕೆಯಾಗಿದೆ ಎಂದರು. ಇತರ ದೇಶಗಳಿಗಿಂತ ಭಾರತದಲ್ಲಿ ತೈಲ ಬೆಲೆಗಳು ಕಡಿಮೆ ಇದೆ. ಸಮತೋಲವನ್ನು ಕಾಪಾಡಿಕೊಳ್ಳುವಲ್ಲಿ ಪ್ರಧಾನಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್, ಪಡಿತರ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳಿಂದ ದೇಶದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹಗಲಿರುಳು ಕೇಂದ್ರ ಸರ್ಕಾರ ಕಾರ್ಯನಿರತವಾಗಿದೆ ಎಂದರು. ಮಾಜಿ ಸಚಿವ ಎನ್. ಮಹೇಶ್ ಮಾತನಾಡಿ, ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶ ಪ್ರಗತಿ ಮತ್ತು ನೆಮ್ಮದಿಯ ಹಾದಿಯಲ್ಲಿದೆ ಎಂದರು. ವಿಕಸಿತ ಭಾರತದ ಕನಸು ನನಸಾಗುವ ಕಾಲ ಸನ್ನಿಹಿತವಾಗುತ್ತಿದೆ. 2047 ರವರೆಗೆ ಭಾರತ ವಿಶ್ವದ ನಂಬರ್ 1 ದೇಶವಾಗಲಿದೆ. ನಾರಿ ಶಕ್ತಿ ವಂದನ್ ಮಸೂದೆಗೆ 6 ತಿಂಗಳ ನಂತರ ಅನುಮೋದನೆ ಸಿಗಲಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಕೇಂದ್ರದ ಯೋಜನೆಗಳೆಲ್ಲಾ ನನ್ನದೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಅನ್ಯಭಾಗ್ಯ ಉತ್ತಮ ಉದಾಹರಣೆಯಾಗಿದೆ ಎಂದರು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ, ಇದನ್ನೆಲ್ಲಾ ಪಕ್ಷದ ಕಾರ್ಯಕರ್ತರು ಸಾಮಾನ್ಯ ಜನರಿಗೆ, ಮತದಾರರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು. ಮಾಜಿ ಶಾಸಕ ಬಿ. ಹರ್ಷವರ್ಧನ್, ಎಸ್. ಬಾಲರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ, ಪ್ರಧಾನ ಕಾರ್ಯದರ್ಶಿ ವಿನಯ್‌ಕುಮಾರ್, ವಿಭಾಗ ಪ್ರಭಾರಿ ಸ್ವಾಮಿ ಮರಳಾಪುರ, ಬಾಲಸುಬ್ರಹಣ್ಯ, ಮಂಗಳಾ ಸೋಮಶೇಖರ್, ರಾಮಚಂದ್ರು, ಪರೀಕ್ಷಿತ ರಾಜ ಅರಸ್, ದಯಾನಂದ ಪಟೇಲ್, ವಸಂತ್ ಕುಮಾರ್, ಉಮಾಶಂಕರ್, ಶವಂತ್ ಪುಟ್ಟಬುದ್ದಿ, ಅಗರ ರಾಜು, ಹೊನ್ನುರು ಮಹದೇವಸ್ವಾಮಿ ಸೇರಿದಂತೆ ಅನೇಕರು ಇದ್ದರು. 25ವೈಎಲ್‌ಡಿ ಚಿತ್ರ03 ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಜೆಎಸ್‌ಎಸ್ ಆಶ್ರಮದ ಸಭಾಂಗಣದಲ್ಲಿ ಸೋಮವಾರ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ-2026ರ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. 25ವೈಎಲ್‌ಡಿ ಚಿತ್ರ04 ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಜೆಎಸ್‌ಎಸ್ ಆಶ್ರಮದ ಸಭಾಂಗಣದಲ್ಲಿ ಸೋಮವಾರ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ-2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಶಿಕ್ಷಣಾರ್ಥಿಗಳು
ಯಳಂದೂರು : ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತವು ವಿಶ್ವದಲ್ಲೇ ಅತ್ಯಂತ ಬಲಿಷ್ಠ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಜೆಎಸ್‌ಎಸ್ ಆಶ್ರಮದಲ್ಲಿ ಸೋಮವಾರ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ-2026ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಇಂದು ವಿಶ್ವದ ದೊಡ್ಡ ಪಕ್ಷಗಳಲ್ಲಿ ಒಂದಾಗಿದೆ. 2028ರಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಇದನ್ನು ಸಹಿಸದ ದೇಶದ ಕೆಲವರು ಇಲ್ಲ ಸಲ್ಲದ ಆರೋಪಗಳಲ್ಲಿ ಕಾಲಾಹರಣ ಮಾಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿಯೂ ಒಂದಾಗಿದೆ. ಇದೊಂದು ದೇಶ ದ್ರೋಹಿ ಚಟುವಟಿಕೆಯಾಗಿದೆ ಎಂದರು. ಇತರ ದೇಶಗಳಿಗಿಂತ ಭಾರತದಲ್ಲಿ ತೈಲ ಬೆಲೆಗಳು ಕಡಿಮೆ ಇದೆ. ಸಮತೋಲವನ್ನು ಕಾಪಾಡಿಕೊಳ್ಳುವಲ್ಲಿ ಪ್ರಧಾನಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್, ಪಡಿತರ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳಿಂದ ದೇಶದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹಗಲಿರುಳು ಕೇಂದ್ರ ಸರ್ಕಾರ ಕಾರ್ಯನಿರತವಾಗಿದೆ ಎಂದರು.
ಮಾಜಿ ಸಚಿವ ಎನ್. ಮಹೇಶ್ ಮಾತನಾಡಿ, ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶ ಪ್ರಗತಿ ಮತ್ತು ನೆಮ್ಮದಿಯ ಹಾದಿಯಲ್ಲಿದೆ ಎಂದರು.
ವಿಕಸಿತ ಭಾರತದ ಕನಸು ನನಸಾಗುವ ಕಾಲ ಸನ್ನಿಹಿತವಾಗುತ್ತಿದೆ. 2047 ರವರೆಗೆ ಭಾರತ ವಿಶ್ವದ ನಂಬರ್ 1 ದೇಶವಾಗಲಿದೆ. ನಾರಿ ಶಕ್ತಿ ವಂದನ್ ಮಸೂದೆಗೆ 6 ತಿಂಗಳ ನಂತರ ಅನುಮೋದನೆ ಸಿಗಲಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಕೇಂದ್ರದ ಯೋಜನೆಗಳೆಲ್ಲಾ ನನ್ನದೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಅನ್ಯಭಾಗ್ಯ ಉತ್ತಮ ಉದಾಹರಣೆಯಾಗಿದೆ ಎಂದರು.
ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ, ಇದನ್ನೆಲ್ಲಾ ಪಕ್ಷದ ಕಾರ್ಯಕರ್ತರು ಸಾಮಾನ್ಯ ಜನರಿಗೆ, ಮತದಾರರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಮಾಜಿ ಶಾಸಕ ಬಿ. ಹರ್ಷವರ್ಧನ್, ಎಸ್. ಬಾಲರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ, ಪ್ರಧಾನ ಕಾರ್ಯದರ್ಶಿ ವಿನಯ್‌ಕುಮಾರ್, ವಿಭಾಗ ಪ್ರಭಾರಿ ಸ್ವಾಮಿ ಮರಳಾಪುರ, ಬಾಲಸುಬ್ರಹಣ್ಯ, ಮಂಗಳಾ ಸೋಮಶೇಖರ್, ರಾಮಚಂದ್ರು, ಪರೀಕ್ಷಿತ ರಾಜ ಅರಸ್, ದಯಾನಂದ ಪಟೇಲ್, ವಸಂತ್ ಕುಮಾರ್, ಉಮಾಶಂಕರ್, ಶವಂತ್ ಪುಟ್ಟಬುದ್ದಿ, ಅಗರ ರಾಜು, ಹೊನ್ನುರು ಮಹದೇವಸ್ವಾಮಿ ಸೇರಿದಂತೆ ಅನೇಕರು ಇದ್ದರು.
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಜೆಎಸ್‌ಎಸ್ ಆಶ್ರಮದ ಸಭಾಂಗಣದಲ್ಲಿ ಸೋಮವಾರ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ-2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಶಿಕ್ಷಣಾರ್ಥಿಗಳು