ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಗುರುವಾರ ಸಾರ್ವಜನಿಕರು ರಕ್ತದಾನ ಮಾಡಿದರು. 
ಚಾಮರಾಜನಗರ

ಉಪವಿಭಾಗ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಗುರುವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತ ಶೇಖರಣಾ ಘಟಕ, ಉಪವಿಭಾಗ ಆಸ್ಪತ್ರೆ ಕೊಳ್ಳೇಗಾಲ ಸಹಯೋಗದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ಲೋಕೇಶ್ವರಿ ಮಾತನಾಡಿ, ರಕ್ತದಾನದಿಂದ ಅಮೂಲ್ಯ ಜೀವಗಳನ್ನು ಉಳಿಸಬಹುದಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯಕರ ವ್ಯಕ್ತಿ ರಕ್ತದಾನ ಮಾಡಬಹುದಾಗಿದೆ. ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಶಿಬಿರದಲ್ಲಿ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ರಕ್ತದಾನ ಮಾಡಿದ್ದಾರೆ. ಇನ್ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಶಿಬಿರವನ್ನು ಆಸ್ಪತ್ರೆಯಲ್ಲಿ ಆಯೋಜಿಸಲಾಗುತ್ತದೆ ಎಂದರು.
ಶಿಬಿರದಲ್ಲಿ 20 ಸಾರ್ವಜನಿಕರು, 20 ಆಸ್ಪತ್ರೆಯ ನೌಕರರು ಸೇರಿ ಒಟ್ಟು 40 ಜನರು ರಕ್ತದಾನ ಮಾಡಿದರು. ಈ ವೇಳೆ ಸರ್ಕಾರಿ ಆಸ್ಪತ್ರೆಯ ರಕ್ತ ಘಟಕದ ಸಿಬ್ಬಂದಿ ಆನಂದ್, ತೇಜಸ್ವಿನ್ ಇತರರಿದ್ದರು.