ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿ ಆಚರಿಸಲಾಯಿತು. ಎಂ.ಎಸ್.ತನ್ಮಯಿ, ಲಕ್ಷ್ಮಣ್, ಷಣ್ಮುಗಂ, ಟಿ.ಆರ್.ಸ್ವಾಮಿ, ರವಿ, ಎಚ್.ಎಸ್.ನಂಜಪ್ಪ, ಕೆ.ಎಂ.ಬಸವಣ್ಣ, ಎಚ್.ಎಂ.ನಂದೀಶ್, ಮಹೇಶ್, ಗುರುಪ್ರಸಾದ್, ನಾಗರಾಜು ಇದ್ದರು.
ಗುಂಡ್ಲುಪೇಟೆ: ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿನ ಎಲ್ಲ ಜನರನ್ನು ಸಮಾನವಾಗಿ ಕಾಣುವ ಉದ್ದೇಶ ಹೊಂದಿದ್ದ ಬಸವಣ್ಣನವರ ಉದ್ದೇಶ ಪಾಲನೆಯಾಗುತ್ತಿಲ್ಲ ಎಂದು ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾ ನಿರ್ದೇಶಕ ಎಸ್.ಎಂ.ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಚುನಾವಣಾ ರಾಜಕೀಯದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳಿಂದ ಜಾತಿ ವಿಷ ಬೀಜ ಬಿತ್ತುವ ಕೆಲಸ ಸಮಾಜದಲ್ಲಿ ಹೆಚ್ಚಾಗುತ್ತಿದೆ. ಶೇ.90ರಷ್ಟು ಮನೆಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುತ್ತಿದೆ. ಆದರೆ ಅವರ ತತ್ವಗಳ ಪಾಲನೆ ಕಡಿಮೆಯಾಗುತ್ತಿದೆ. ಆದ್ದರಿಂದ ಇನ್ನಾದರೂ ಬಸವಣ್ಣನವರ ತತ್ವ ಮತ್ತು ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಾಗಿದೆ ಎಂದು ಹೇಳಿದರು.
ಇದಕ್ಕೂ ಮೊದಲು ಬಸವೇಶ್ವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ತಹಸೀಲ್ದಾರ್ ಎಂ.ಎಸ್.ತನ್ಮಯಿ, ಶಿರಸ್ತೇದಾರ್ ಲಕ್ಷ್ಮಣ್ ತಾಪಂ ಇಒ ಷಣ್ಮುಗಂ, ಬಿಇಒ ಟಿ.ಆರ್.ಸ್ವಾಮಿ, ಮಹಾಸಭಾ ತಾಲೂಕು ಅಧ್ಯಕ್ಷ ರವಿ, ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ನಿರ್ದೇಶಕರಾದ ಕೆ.ಎಂ.ಬಸವಣ್ಣ, ಎಚ್.ಎಂ.ನಂದೀಶ್, ಮಹೇಶ್, ಗುರುಪ್ರಸಾದ್, ಎಪಿಎಂಸಿ ಅಧ್ಯಕ್ಷ ನಾಗರಾಜು, ಮುಖಂಡರಾದ ಮಂಜು, ಸುಬ್ಬು, ಗುರುಸ್ವಾಮಿ ಸೇರಿದಂತೆ ಹಲವರು ಇದ್ದರು.