ಲೋಕಾಯುಕ್ತ ಅಧಿಕಾರಿಗಳ ಬಲೆಗೆ 
ಚಾಮರಾಜನಗರ

ನಗರಸಭೆ ಅಧಿಕಾರಿಗಳಿಬ್ಬರು ಲೋಕಾ ಬಲೆಗೆ

ಚಾಮರಾಜನಗರ: ಚಾಮರಾಜನಗರ ನಗರಸಭೆಯಲ್ಲಿ ಇ-ಸ್ವತ್ತು ಮಾಡಿಕೊಡಲು 25 ಸಾವಿರ ರೂ. ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಮಂಗಳವಾರ ಸಂಜೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ನಗರಸಭೆ ಕಂದಾಯ ನಿರೀಕ್ಷಕ ಶಕೀಲ್ ಅಹಮದ್, ಕಂದಾಯ ಅಧಿಕಾರಿ ಹೇಮಕುಮಾರ್ ಬಂಧಿತರು. ನಗರದ ಉಪ್ಪಾರ ಬೀದಿಯ ನಿವಾಸಿ ಮೀಸೆ ನಾಗರಾಜು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಗಿಳಿದರು. ನಿವೇಶನದ ಇ-ಖಾತೆ ಮಾಡಿಕೊಡಲು 25 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತೆಯೇ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಇನ್‌ಪೆಕ್ಟರ್ ಲೋಹಿತ್ ಮತ್ತು ಸಿಬ್ಬಂದಿ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.