ಹನೂರು: ತಾಲೂಕಿನ ಕೌದಳ್ಳಿ ಸಮೀಪದ ಸಂತೆಖಾನೆಯ ಬಳಿ ಬೈಕ್‌ನಿಂದ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಶುಕ್ರವಾರ ಮೃಪಟ್ಟಿದ್ದಾರೆ.
ತಾಲೂಕಿನ ವಡಕೆಹಳ್ಳ ಗ್ರಾಮದ ವಿಜಯ್(30) ಮೃತರು. ಗುರುವಾರ ಕಾರ್ಯನಿಮಿತ್ತ ಬೈಕ್‌ನಲ್ಲಿ ಕೌದಳ್ಳಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಸಂತೆಖಾನೆಯ ಬಳಿ ಆಯತಪ್ಪಿ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿತ್ತು ಸ್ಥಳಕ್ಕಾಗಮಿಸಿದ ಹೈವೇ ಪ್ಯಾಟ್ರೋಲ್ ಪೊಲೀಸರು ಗಾಯಾಳುವನ್ನು ತುರ್ತು ವಾಹನದ ಮೂಲಕ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.
ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಆರ್ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ದೇಹ ಹಸ್ತಾಂತರಿಸಲಾಯಿತು.