ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಅಗಸ್ತ್ಯ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಚಾಲನೆ ನೀಡಿದರು. ಜಾಕೋಬ್ ಒರವೆಕಲ್, ನಾಗರಾಜಯ್ಯ ಅಚ್ಗಾಳ್, ಎ.ಎನ್.ರವಿಕಿರಣ್, ನಾಗೇಂದ್ರ ಇದ್ದರು. 
ಚಾಮರಾಜನಗರ

ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಶಿಕ್ಷಣ ಅಗತ್ಯ

ಪ್ರಮುಖ ಮುಖ್ಯಾಂಶಗಳು

  • ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಮತ
  • ವಾರ್ಷಿಕೋತ್ಸವ ಕಾರ್ಯಕ್ರಮ
ಕೊಳ್ಳೇಗಾಲ: ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಬೇಕು ಎಂದು ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಅಗಸ್ತ್ಯ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವುದರ ಜತೆಗೆ ಉತ್ತಮ ಸಂಸ್ಕಾರವನ್ನು ನೀಡುವುದು ಪಾಲಕರ ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಕ್ಕಳಿಗೆ ಅತ್ಯಗತ್ಯವಾಗಿದೆ. ಹಾಗಾಗಿ ಯಾವೊಬ್ಬ ಮಗುವು ಶಿಕ್ಷಣದಿಂದ ವಂಚಿತವಾಗಬಾರದು. ಬದುಕಿನಲ್ಲಿ ಶಿಕ್ಷಣ ಇದ್ದರೆ ಮಾತ್ರ ದೊಡ್ಡ ಮಟ್ಟದ ಸಾಧನೆ ಮಾಡಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಬಾಲ್ಯದಿಂದಲೇ ಮಕ್ಕಳು ಓದಿನ ಮೇಲೆ ಹೆಚ್ಚಿನ ಆಸಕ್ತಿ ವಹಿಸಬೇಕು. ನಿತ್ಯ 8 ಗಂಟೆಗಳ ಕಾಲ ಓದಬೇಕು. ಓದು ಎನ್ನುವುದು ಅಪರಂಜಿ ಇದ್ದಹಾಗೆ ಎಂದರು.
ಈ ಕಾರ್ಯಕ್ರಮದಲ್ಲಿ ಕೇರಳದ ಫಾದರ್ ಜಾಕೋಬ್ ಒರವೆಕಲ್, ಅಗಸ್ತ್ಯ ಗುರುಕುಲ ಸಂಸ್ಥಾಪಕ ನಾಗರಾಜಯ್ಯ ಅಚ್ಗಾಳ್, ಎ.ಎನ್ ರವಿ ಕಿರಣ್, ಜಿ.ಪಂ.ಮಾಜಿ ಅಧ್ಯಕ್ಷ ನಾಗೇಂದ್ರ ಇತರರು ಇದ್ದರು.