ಅಧಿಕಾರಿಗೆ ನಿಂದಿಸಿದ ಪಾನಮತ್ತನ ವಿರುದ್ಧ ದೂರು
- ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂಬ ಆರೋಪ
ಕೊಳ್ಳೇಗಾಲ:ಪಾನಮತ್ತನಾಗಿ ಕರ್ತವ್ಯದಲ್ಲಿದ್ದ ಅಧಿಕಾರಿಯನ್ನು ನಿಂದಿಸಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅಡ್ಡಿ ಉಂಟು ಮಾಡಿದ್ದಾನೆ ಎಂದು ಆ ರೋಪಿಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವ್ಯಕ್ತಿಯೊಬ್ಬನ ವಿರುದ್ಧ ಶುಕ್ರವಾರ ಪಟ್ಟಣ ಪೊಲೀಸರಿಗೆ ದೂರು ನೀಡಿದ್ದಾರೆ.
ತಾಲೂಕಿನ ಮುಳ್ಳೂರು ಗ್ರಾಮದ ನಿವಾಸಿ ಮಂಟೇಲಿಂಗಶೆಟ್ಟಿ ವಿರುದ್ಧ ತಾಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ ದೂರು ನೀಡಿದ್ದಾರೆ.
ತಾಲೂಕು ಪಂಚಾಯಿತಿ ಕಚೇರಿಗೆ ಮದ್ಯಪಾನ ಮಾಡಿಕೊಂಡು ಬಂದು ಕಾರ್ಯನಿರ್ವಹಣಾಧಿಕಾರಿ ಕೊಠಡಿಗೆ ಏಕಾಏಕಿ ಒಳಪ್ರವೇಶಿಸಿ ಏಕವಚನದಲ್ಲಿ ನಿಂದಿಸಿ ಕಚೇರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ನಾನು ಜೈಲಿಗೆ ಹೋಗಿ ಬಂದಿದ್ದೇನೆ ಎಂದು ಬೆದರಿಕೆ ಹಾಕಿ, ಸಾರ್ವಜನಿಕ ಕೆಲಸಕ್ಕೆ ತೊಂದರೆಪಡಿಸಿ ಅಶಾಂತಿ ಉಂಟು ಮಾಡಿದ್ದಾನೆ ದೂರಿದ್ದಾರೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.