ಶಿವನ ಸಮುದ್ರ ಗ್ರಾಮದಲ್ಲಿರುವ ಶ್ರೀ ಮಧ್ಯರಂಗನಾಥ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವೀಕ್ಷಿಸಿದರು. ದಿನೇಶ್ ಕುಮಾರ್ ಮೀನಾ, ಬಸವರಾಜು, ಸುರೇಶ್ ಇದ್ದರು. 
ಚಾಮರಾಜನಗರ

ಜರೂರಾಗಿ ಕಾಮಗಾರಿ ಪೂರ್ಣಗೊಳಿಸಿ

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಸೂಚನೆ
ಕೊಳ್ಳೇಗಾಲ: ತಾಲೂಕಿನ ಶಿವನಸಮುದ್ರ ಗ್ರಾಮದಲ್ಲಿರುವ ಶ್ರೀ ಮಧ್ಯರಂಗನಾಥ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯನ್ನು ಜರೂರಾಗಿ ಮುಕ್ತಾಯಗೊಳಿಸಬೇಕೆಂದು ಹನೂರು ಶಾಸಕ ಎಂ.ಆರ್.ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಧ್ಯ ರಂಗನಾಥ ಸ್ವಾಮಿ ದೇವಾಲಯಕ್ಕೆ ಬುಧವಾರ ಭೇಟಿ ನೀಡಿ ವೀಕ್ಷಿಸಿದ ಬಳಿಕ ಅಧಿಕಾರಿಗಳಿಂದ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಮಾಹಿತಿ ಪಡೆದು ಮಾತನಾಡಿದರು. ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಮುಕ್ತಾಯ ಹಂತ ತಲುಪಿದೆ. ಬಾಕಿ ಉಳಿದಿರುವ ಸಣ್ಣ-ಪುಟ್ಟ ಕಾಮಗಾರಿಗಳನ್ನು ಜರೂರಾಗಿ ಪೂರ್ಣಗೊಳಿಸಬೇಕು. ಮುಂದೆ ನಡೆಯುವ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ದೇವಾಲಯ ವಿಚಾರ ಚರ್ಚೆಯಾಗಲಿದೆ. ದೇವಾಲಯ ಉದ್ಘಾಟನೆ ದಿನಾಂಕ ನಿಗದಿಯಾಗಲಿದೆ. ಹಾಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಭಕ್ತರಿಗೆ ಕುಡಿಯುವ ನೀರಿನ ಸೌಕರ್ಯ ಒದಗಿಸಬೇಕು ಎಂದರು.
ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್‌ಕುಮಾರ್ ಮೀನಾ, ತಹಸೀಲ್ದಾರ್ ಬಸವರಾಜು, ಲೋಕೋಪಯೋಗಿ ಎಇಇ ಪುರುಷೋತ್ತಮ್, ಶಿವನಸಮುದ್ರದ ಸಮೂಹ ದೇವಾಲಯಗಳ ಕಾರ್ಯ ನಿರ್ವಾಹಕ ಅಧಿಕಾರಿ ಸುರೇಶ್, ಸರ್ವೇ ಇಲಾಖೆಯ ನಟರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲೇಶ್, ಪ್ರಭುಸ್ವಾಮಿ, ಶಾಂತರಾಜು ಇತರರಿದ್ದರು.