ಮಂಗಲ ಗ್ರಾಮ ಪಂಚಾಯಿತಿಗೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಪರಿಶೀಲಿಸಿದರು. ಚೈತ್ರಾ, ದೊರೆಯಾ, ಮಹಾಲಕ್ಷ್ಮೀ ಇತರರಿದ್ದರು. 
ಚಾಮರಾಜನಗರ

ನಿಗದಿತ ಅವಧಿಯೊಳಗೆ ಕೆಲಸ ಪೂರ್ಣಗೊಳಿಸಿ

ಪ್ರಜ್ವಲ್.ಎನ್
ಹನೂರು: ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿ ಕಚೇರಿಗೆ ಸೋಮವಾರ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಜನಗಣತಿ ಹಾಗೂ ಗ್ರಾಪಂ ಕೆಲಸ ಕಾರ್ಯಗಳ ಬಗ್ಗೆ ಅಗತ್ಯ ಮಾಹಿತಿ ಪಡೆದರು.
ಗ್ರಾಪಂ ಕಚೇರಿಗೆ ಭೇಟಿ ನೀಡಿದ ಡಿಸಿ, ಗಣತಿದಾರರು ಕೈಗೊಂಡಿರುವ ಕಾರ್ಯದ ಬಗ್ಗೆ ಮಾಹಿತಿ ಪಡೆದು ನಿಖರ ಹಾಗೂ ನಿಗದಿತ ಅವಧಿಯೊಳಗೆ ಕೆಲಸ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸುವಂತೆ ಪಿಡಿಒ ದೊರೆಯಾ ಅವರಿಗೆ ಸೂಚಿಸಿದರು. ಇನ್ನುಳಿದಂತೆ ಗ್ರಾಪಂ ಕಾರ್ಯನಿರ್ವಹಣೆಯ ಬಗ್ಗೆ ಡಿಸಿ ಅವರು ಮಾಹಿತಿ ಪಡೆದರು.
ತಹಸೀಲ್ದಾರ್ ಕೆ.ಎನ್ ಚೈತ್ರಾ ಇತರರಿದ್ದರು.