ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಕೊಳ್ಳೇಗಾಲ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು, ನಗರಸಭೆ ಮಾಜಿ ಸದಸ್ಯರು ಪ್ರತಿಭಟನೆ ನಡೆಸಿದರು.
ಕೊಳ್ಳೇಗಾಲ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಮುಖಂಡರು, ನಗರಸಭೆ ಮಾಜಿ ಸದಸ್ಯರು ಪ್ರತಿಭಟನೆ ನಡೆಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ನಗರಸಭೆ ಮಾಜಿ ಅಧ್ಯಕ್ಷ ಶಾಂತರಾಜು, ಸದಸ್ಯ ಮಂಜುನಾಥ್ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಶಾಂತರಾಜು ಬಸ್ತೀಪುರ ಮಾತನಾಡಿ, ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿಚಾರ್ಚ್ ನಡೆಸಿದ್ದಾರೆ. ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿ ಸಮೂಹದ ಪ್ರತಿಭಟನೆ ಹತ್ತಿಕಲಾಗಿದೆ. ವಿದ್ಯಾರ್ಥಿಗಳ ಸಮಸ್ಯೆ ಅರಿತು ನ್ಯಾಯಕೊಡಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯಾದ್ಯಂತ ಸರ್ಕಾರದ ನಡೆಯನ್ನು ಖಂಡಿಸಲಾಗುತ್ತಿದೆ. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿರುವುದನ್ನು ಪ್ರಶ್ನಿಸಿ ಹೋರಾಟಕ್ಕಿಳಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆ ದೌರ್ಜನ್ಯವೆಸಲಾಗಿದೆ ಎಂದು ದೂರಿದರು.
ಮುಖಂಡ ಜಗದೀಶ್ ಮಾತನಾಡಿ, ಅಂಹಿಸಾ ಮಾರ್ಗದಲ್ಲಿ ದೇಶ ಸಾತಂತ್ರ್ಯ ಪಡೆದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದರೂ ಪ್ರತಿಭಟನೆ ನಡೆಸುವವರ ಮೇಲೆ ದೌರ್ಜನ್ಯ ಮಾಡಲಾಗಿದೆ. ದೇಶದಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯಸಿಗಬೇಕು ಎಂದು ಆಗ್ರಹಿಸಿದರು.
ಮಂಜುನಾಥ್, ಪ್ರಕಾಶ್ ಶಂಕನಪುರ, ರಾಮಕೃಷ್ಣ, ರಾಘವೇಂದ್ರ, ಕೃಷ್ಣವೇಣಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಬಸ್ತೀಪುರ ರವಿ, ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ಗೋವಿಂದರಾಜು, ಮುಖಂಡರಾದ ಬಸ್ತೀಪುರ ಪ್ರಕಾಶ್, ಜಗದೀಶ್ ಶಂಕನಪುರ, ಶ್ರೀಧರ್, ಜಗದೀಶ್, ದಿಲೀಪ್ ಸಿದ್ದಪ್ಪಾಜಿ, ಡಾ.ಗುರುಮೂರ್ತಿ, ರವಿ, ಬಾಲರಾಜು, ಸೋಮು, ಕರವೇ( ಪ್ರವೀಣ್ ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಜಗದೀಶ್ ಇದ್ದರು.