ಕೊಳ್ಳೇಗಾಲ ತಾಲೂಕಿನ ಕೊತ್ತನೂರು ಗ್ರಾ.ಪಂ.ವ್ಯಾಪ್ತಿಯ ಚಿಕ್ಕಲ್ಲೂರು ರಸ್ತೆಯಲ್ಲಿ ಸೇತುವೆ ಅಭಿವೃದ್ಧಿಗೆ ಕಾಮಗಾರಿಗೆ ಭಾನುವಾರ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.
- ಭೂಮಿಪೂಜೆ ನೆರವೇರಿಸಿದ ಶಾಸಕ ಎಂ.ಆರ್. ಮಂಜುನಾಥ್
ಕೊಳ್ಳೇಗಾಲ: ತಾಲೂಕಿನ ಕೊತ್ತನೂರು ಗ್ರಾಪಂ ವ್ಯಾಪ್ತಿಯ ಚಿಕ್ಕಲ್ಲೂರು ರಸ್ತೆಯಲ್ಲಿ ಪ್ರತ್ಯೇಕ ಎರಡು ಸೇತುವೆ ನಿರ್ಮಾಣ ಕಾಮಗಾರಿಗೆ ಭಾನುವಾರ ಶಾಸಕ ಎಂ.ಆರ್.ಮಂಜುನಾಥ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೊತ್ತನೂರು ಗ್ರಾಮದ ಜಿ.ವಿ.ಗೌಡ ಶಾಲೆ ಸಮೀಪದ ಸೇತುವೆ ಅಭಿವೃದ್ಧಿಗೆ 3.5 ಕೋಟಿ ರೂ. ಹಾಗೂ ಚಿಕ್ಕಲೂರು ಮುಖ್ಯ ರಸ್ತೆಯಲ್ಲಿ ಸೇತುವೆ ಅಭಿವೃದ್ಧಿಗೆ 2 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬಹುದಿನಗಳಿಂದ ಈ ಭಾಗದ ಜನರು ಎದುರಿಸುತ್ತಿದ್ದ ಸಂಚಾರದ ಸಮಸ್ಯೆಗಳಿಗೆ ಸೇತುವೆಗಳ ಅಭಿವೃದ್ಧಿ ಪರಿಹಾರ ಒದಗಿಸಲಿದ್ದು, ಮಳೆಗಾಲದಲ್ಲಿ ನೀರು ಹರಿದು ರಸ್ತೆ ಸಂಪರ್ಕ ಕಡಿತಗೊಳ್ಳುವಂತಹ ಪರಿಸ್ಥಿತಿಯನ್ನು ತಪ್ಪಿಸಲು ಸಹಕಾರಿಯಾಗಲಿದೆ. ಸೇತುವೆಗಳ ನಿರ್ಮಾ ಣದಿಂದ ಸುತ್ತಮುತ್ತಲಿನ ಗ್ರಾಮಗಳ ಜನರು, ವಿದ್ಯಾರ್ಥಿಗಳು, ರೈತರು ಹಾಗೂ ವಾಹನ ಸವಾರರಿಗೆ ಸುಗಮ, ಸುರಕ್ಷಿತ ಹಾಗೂ ನಿರಂತರ ಸಂಚಾರ ವ್ಯವಸ್ಥೆ ಕಲ್ಪಿಸಲು ಸಾಧ್ಯ ವಾಗಲಿದೆ ಎಂದರು.
ಲೋಕೋಪಯೋಗಿ ಇಲಾಖೆ ಎಇಇ ಕುಮಾರ್, ನಾಗರಾಜು, ಭದ್ರ, ಲೋಕೇಶ್, ಷಣ್ಮುಖ, ಮಹೇಶ್, ಮಹದೇವಸ್ವಾಮಿ, ಪಾಪಣ್ಣ, ನಾಗಣ್ಣ, ಬಸವರಾಜು, ರಾಜಗೋಪಾಲ್, ಮಂಜೇಶ್ ಗೌಡ, ಮಣಿ, ಗೋವಿಂದ ಇತರರು ಇದ್ದರು.