ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿಬೆಟ್ಟದ ತಪ್ಪಲಿನಲ್ಲಿ ಬಸ್ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಎಸ್.ಪ್ರಭಾಕರನ್, ಬಿ.ಎಂ.ಮಲ್ಲೇಶ್, ಎಚ್.ಎಸ್.ನಂಜುಂಡಪ್ರಸಾದ್, ಗೋಪಾಲಕೃಷ್ಣ ಭಟ್, ಎಚ್.ಎಸ್.ನಂಜಪ್ಪ, ಜಿ.ಕೆ.ಲೋಕೇಶ್, ಕಳ್ಳಿಪುರ ರವಿ, ಕುಮಾರ್ ಇದ್ದರು.
- ಶಾಸಕ ಎಚ್.ಎಂ.ಗಣೇಶ್ ಪ್ರಸಾದ್
- ಗೋಪಾಲಸ್ವಾಮಿಬೆಟ್ಟದ ತಪ್ಪಲಿನಲ್ಲಿ
- 20 ಲಕ್ಷ ರೂ. ವೆಚ್ಚದಲ್ಲಿ
ಗುಂಡ್ಲುಪೇಟೆ: ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗುವ ಪ್ರಯಾಣಿಕರ ಅನುಕೂಲಕ್ಕೆ ಬಸ್ ಶೆಲ್ಟರ್ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ಗೋಪಾಲಸ್ವಾಮಿಬೆಟ್ಟದ ತಪ್ಪಲಿನಲ್ಲಿ ಸೋಮವಾರ 20 ಲಕ್ಷ ರೂ. ವೆಚ್ಚದಲ್ಲಿ ಬಸ್ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಬೆಟ್ಟಕ್ಕೆ ಹೋಗುವ ಪ್ರಯಾಣಿಕರು ಬೇಸಿಗೆಯಲ್ಲಿ ಬಿಸಿಲು ಹಾಗೂ ಮಳೆಗಾಲದಲ್ಲಿ ಸರದಿ ಸಾಲಿನಲ್ಲಿ ನಿಂತು ಕಾಯುವಂತಾಗಿದ್ದ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಶೆಲ್ಟರ್ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಪಾರ್ಕಿಂಗ್‌ನಲ್ಲಿ ಅರಣ್ಯ ಇಲಾಖೆ ನಿರ್ಮಿಸಿದ್ದ ಶೌಚಗೃಹವನ್ನು ಉದ್ಘಾಟಿಸಿದರು. ಬಂಡೀಪುರ ಹುಲಿ ಯೋಜನೆಯ ಕ್ಷೇತ್ರ ನಿರ್ದೇಶಕ ಎಸ್.ಪ್ರಭಾಕರನ್, ಗೋಪಾಲಸ್ವಾಮಿ ಬೆಟ್ಟ ವಲಯರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್, ಗೋಪಾಲಸ್ವಾಮಿ ಬೆಟ್ಟದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಭೂನ್ಯಾಯ ಮಂಡಲಿಯ ಸದಸ್ಯ ಜಿ.ಕೆ.ಲೋಕೇಶ್, ಕಳ್ಳಿಪುರ ರವಿ, ಕುಮಾರ್ ಹಲವರು ಇದ್ದರು.