ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಹನುಮಂತು, ಗೋವಿಂದರಾಜು, ನೀರು ಗೋವಿಂದರಾಜು, ಚನ್ನಂಜಯ್ಯ, ಮಲ್ಲಿಕಾರ್ಜುನ, ಪಾಪ್ಪಯ್ಯ ಇತರರಿದ್ದರು.  
ಚಾಮರಾಜನಗರ

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಆದ್ಯತೆ ನೀಡಲಿ

ಕಿರಣ್ ಮಾದರಹಳ್ಳಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿಕೆ
  • ಸಿ.ಪುಟ್ಟರಂಗಶೆಟ್ಟಿ ಭಾನುವಾರ ಭೂಮಿಪೂಜೆ ನೆರವೇರಿಸಿದರು
ಚಾಮರಾಜನಗರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ 4.20 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಸಿದ್ದಯ್ಯನಪುರ ಗ್ರಾಮದಿಂದ ಕಲ್ಕಟ್ಟ ಹೋಗುವ ರಸ್ತೆ 1.25 ಕೋಟಿ ರೂ., ಹೊಂಗಲವಾಡಿಯಿಂದ ಸಿದ್ದಯ್ಯಪುರ ಗ್ರಾಮಕ್ಕೆ ಸಾಗುವ ರಸ್ತೆಗೆ 1.70 ಕೋಟಿ ರೂ. ವೆಚ್ಚ, ಬಂಡಿಗೆರೆ ಗ್ರಾಮದಿಂದ ಬ್ಯಾಡಮೂಡ್ಲು ಗ್ರಾಮಕ್ಕೆ ಹೋಗುವ ರಸ್ತೆ 1.25 ಕೋಟಿ ರೂ. ವೆಚ್ಚದಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ ನಿರ್ಮಿಸಲಾಗುವುದು ಎಂದು ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಗ್ರಾಮೀಣ ರಸ್ತೆಗಳು ಅಭಿವೃದ್ಧಿಗೆ ಪೂರಕವಾಗಿವೆ. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ ಈ ಭಾಗದ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ಧರಾಗಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಸರ್ಕಾರ ಮಂಜೂರು ಮಾಡಿರುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಮುಖಂಡರಾದ ಹನುಮಂತು, ಗೋವಿಂದರಾಜು, ನೀರು ಬಳಕೆದಾರರ ಸಂಘದ ಅಧ್ಯಕ್ಷ ಗೋವಿಂದರಾಜು, ಯಜಮಾನರಾದ ಚನ್ನಂಜಯ್ಯ, ಮಲ್ಲಿಕಾರ್ಜುನ, ಪಾಪ್ಪಯ್ಯ, ಮುಖಂಡರಾದ ಶ್ರೀಕಂಠಮೂರ್ತಿ, ನಂಜುಂಡಸ್ವಾಮಿ, ಡಿ.ಎಸ್.ಚನ್ನಂಜಯ್ಯ, ಬಸವಣ್ಣ, ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್, ಪ್ರಕಾಶ್, ಹೋಗಲವಾಡಿ ಗ್ರಾಮದ ಯಜಮಾನರಾದ ಗುರುಸಿದ್ದಯ್ಯ, ಮಹದೇವಯ್ಯ, ಬಸವರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಮಾದು, ಬಸವರಾಜು, ದೊಡ್ಡಣ್ಣ, ಸೋಮಣ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪುಟ್ಟಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಬ್ಯಾಡಮೂಡ್ಲು ರಾಜಣ್ಣ, ಮಹೇಶ್, ಮರಿಸ್ವಾಮಿ, ಕೆಆರ್‌ಐಡಿಎಲ್ ಇಂಜಿನಿಯರ್‌ಗಳಾದ ಅರುಣ್, ಮಹದೇವಪ್ರಸಾದ್ ಸೇರಿದಂತೆ ಇತರರು ಹಾಜರಿದ್ದರು.