ಬರಗಿ ಗ್ರಾಮದ ಕೆಂಪಾಚಾರಿ ಎಂಬುವರ ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ.
ಗುಂಡ್ಲುಪೇಟೆ: ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ಹಸುಗಳು ಬಲಿಯಾಗುತ್ತಿವೆ. ಗುರುವಾರ ಸಂಜೆ ಕಣ್ಣೇಗಾಲ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುವನ್ನು ಹುಲಿ ದಾಳಿ ಮಾಡಿ ಕೊಂದುಹಾಕಿತ್ತು. ಬಫರ್ ವಲಯದ ಅರಣ್ಯಾಧಿಕಾರಿಗಳು ಹುಲಿ ಸೆರೆಗೆ ಬೋನು ಅಳವಡಿಸಿದ್ದರೂ ಹುಲಿ ಅತ್ತ ಸುಳಿದಿಲ್ಲ.
ಶನಿವಾರ ಮಧ್ಯಾಹ್ನ 12ಕ್ಕೆ ಓಂಕಾರ ವಲಯದ ಕಾಡಂಚಿನ ಬರಗಿ ಗ್ರಾಮದ ಕೆಂಪಾಚಾರಿ ಎಂಬುವರ ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಹುಲಿಯ ಹೆಜ್ಜೆಗಳನ್ನು ಪತ್ತೆಹಚ್ಚಿದರು. ಹುಲಿ ಸೆರೆಗೆ ಬೋನು ಅಳವಡಿಸುವುದಾಗಿ ಭರವಸೆ ನೀಡಿದರು.