ಗುಂಡ್ಲುಪೇಟೆ ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು. 
ಚಾಮರಾಜನಗರ

ಮಾನವ ಸರಪಳಿ ರಚಿಸಿ ಆಕ್ರೋಶ

ನಾಗೇಶ ಎಸ್
ಗುಂಡ್ಲುಪೇಟೆ: ಕಾವೇರಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ ನೀರು ಹರಿಸಲು ನೀಡಿರುವ ಆದೇಶವನ್ನು ಖಂಡಿಸಿ, ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಮಹದೇವಪ್ಪ ನೇತೃತ್ವದಲ್ಲಿ ಪ್ರವಾಸಿ ಮಂದಿರದಿಂದ ಮೆರವಣಿಗೆ ಸಾಗಿದ ರೈತರು, ಇಡೀ ರಾಜ್ಯವೇ ಮಳೆ ಬೀಳದೆ ಕುಡಿಯುವ ನೀರಿನ ಸಂಕಷ್ಟ ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ನೀಡಿದ ಆದೇಶದ ಖಂಡನೀಯ ಎಂದು ಸಾರಿಗೆ ಬಸ್ ನಿಲ್ದಾಣದ ಎದುರು ಮಾನವ ಸರಪಳಿ ರಚಿಸಿ, ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕರ್ನಾಟಕದ ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ಒತ್ತಾಯಿಸಿದರು. ರಾಜ್ಯದಲ್ಲಿ ನೀರಿನ ಕೊರತೆ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವ ಆದೇಶವನ್ನು ತಕ್ಷಣ ಮರುಪರಿಶೀಲಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶಿವಣ್ಣ, ಪ್ರವೀಣ ಸೇರಿದಂತೆ ಹಲವರು ಇದ್ದರು.