ನಗರದಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಮಕ್ಕಳನ್ನು ದತ್ತು ಪಡೆಯಲು ಇರುವ ಕಾನೂನು ಮಾರ್ಗಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ.ಶ್ರೀನಿವಾಸ್, ಎಂ.ಅಶೋಕ, ಕುಮಾರ ಇತರರು ಇದ್ದರು. ದತ್ತು ಮಾಸಾಚರಣೆ
ಚಾಮರಾಜನಗರ

ಕಾನೂನುಬದ್ಧ ದತ್ತು ಪ್ರಕ್ರಿಯೆಗೆ ಅರಿವು ಮೂಡಿಸಿ

ಅಧಿಕಾರಿಗಳಿಗೆ ಟಿಎಚ್‌ಒ ಡಾ.ಶ್ರೀನಿವಾಸ್ ಸೂನಚೆ

ಚಾಮರಾಜನಗರ: ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಪಾಲಕರಾಗಲು ಯಾವುದೇ ಅಡ್ಡ ದಾರಿಗಳಿಲ್ಲ. ಕಾನೂನು ಬದ್ಧ ದತ್ತು ಸ್ವೀಕಾರವೇ ಸುರಕ್ಷಿತ ಮಾರ್ಗ ಎಂಬ ಘೋಷವಾಕ್ಯದಡಿ ಮಕ್ಕಳನ್ನು ದತ್ತು ಪಡೆಯಲು ಇರುವ ಕಾನೂನು ಮಾರ್ಗಗಳ ಕುರಿತು ನಗರದಲ್ಲಿ ಶನಿವಾರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಚಾಮರಾಜನಗರ ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಕಿರಿಯ ಮತ್ತು ಹಿರಿಯ ಆರೋಗ್ಯ ನಿರೀಕ್ಷಕರು, ಆರೋಗ್ಯ ಅಧಿಕಾರಿಗಳಿಗೆ ಅರಿವು ಮೂಡಿಸಲಾಯಿತು.

ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ಮಾತನಾಡಿ, ಅನಾಥ, ಪಾಲಕರು ಸ್ವಯಂ ಪ್ರೇರಣೆಯಿಂದ ಕಾನೂನು ಬದ್ಧವಾಗಿ ಮಕ್ಕಳನ್ನು ನಿಗದಿತ ದತ್ತು ಪ್ರಕ್ರಿಯೆ ಮೂಲಕವೇ ದತ್ತು ಪಡೆಯುವಂತೆ ಜನಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು. ಇದೇ ವೇಳೆ ಅಧಿಕಾರಿಗಳು, ಸಿಬ್ಬಂದಿಗೆ ಕಾನೂನುಬದ್ಧ ಸ್ವೀಕಾರದ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಸಾಂಸ್ಥಿಕ ರಕ್ಷಣಾಧಿಕಾರಿ ಕುಮಾರ ಅವರು, ಕಾನೂನುಬದ್ಧ ದತ್ತು ಪ್ರಕ್ರಿಯೆ ಕುರಿತು ಮಾಹಿತಿ ನೀಡಿ, ಸಾಕ್ಷ್ಯಚಿತ್ರ ಪ್ರದರ್ಶಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಸಾಂಸ್ಥಿಕ ರಕ್ಷಣಾಧಿಕಾರಿ ಎಂ.ಅಶೋಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.