ಕೊಳ್ಳೇಗಾಲದಲ್ಲಿ ಆಯೋಜನೆಗೊಂಡಿರುವ ಪ್ರೀಮಿಯರ್ ಲೀಗ್ -05ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳಿಗೆ ಗುರುವಾರ ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಶುಭ ಹಾರೈಸಿದರು. ಪಂದ್ಯಾವಳಿ ಆಯೋಜಕ ಪ್ರಜ್ವಲ್, ಮುಖಂಡರಾದ ಪ್ರದೀಪ್,ತೋಟೇಶ್, ಕಂದಹಳ್ಳಿ ನಂಜುಂಡಸ್ವಾಮಿ, ಡಾ.ಗುರುಮೂರ್ತಿ ಇದ್ದರು.  
ಚಾಮರಾಜನಗರ

ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿ ಆರಂಭ

ಎ. ಆರ್. ರಘುರಾಮ
ಕೊಳ್ಳೇಗಾಲ: ಪಟ್ಟಣದ ಎಂಜಿಎಸ್‌ವಿ ಕಿರಿಯ ಕಾಲೇಜು ಮೈದಾನದಲ್ಲಿ ಯೋಜನೆಗೊಂಡಿರುವ ಅಂಬೇಡ್ಕರ್ ಪ್ರೀಮಿಯರ್ ಲೀಗ್-05 ಮೂರು ದಿನಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಮತ್ತು ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಚಾಲನೆ ನೀಡಿ ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಈ ಸಂದರ್ಭ ಮಾತನಾಡಿದ ಪಂದ್ಯಾವಳಿ ಆಯೋಜಕ ಪ್ರಜ್ವಲ್, 8 ತಂಡಗಳು ಸೆಣಸಲಿರುವ ಎಂಟು ಸೀಮಿತ ಓವರ್ ಪಂದ್ಯವು 3 ದಿನಗಳ ಕಾಲ ನಡೆಯಲಿದೆ ಎಂದರು. ಅಂತಿಮ ಪಂದ್ಯ ಗೆದ್ದ ತಂಡಕ್ಕೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂ. ನಗದು ಹಾಗೂ ಟ್ರೋಫಿ, ರನ್ನರ್ ತಂಡಕ್ಕೆ 50 ಸಾವಿರ ರೂ. ನಗದು ಮತ್ತು ಟ್ರೋಫಿ ನೀಡಲಾಗುವುದು ಎಂದರು. ಇದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ, ಸರಣಿ ಶ್ರೇಷ್ಠ ಪ್ರಶಸ್ತಿ, ಬೆಸ್ಟ್ ಬೋಲರ್, ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿಗಳನ್ನೂ ನೀಡಲಾಗುವುದು ಎಂದರು.
ಮುಖಂಡರಾದ ಓಲೆ ಮಹದೇವ, ಪ್ರದೀಪ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಂದಹಳ್ಳಿ ನಂಜುಂಡಸ್ವಾಮಿ, ಡಾ.ಗುರು ಮೂರ್ತಿ ಮತ್ತಿತರರಿದ್ದರು.