ಯಳಂದೂರು: ಮಿಲಿಟರಿ ಚಾಲಕರಿಗೆ ತರಬೇತಿ ನೀಡುವ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತರನ್ನು ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದ ನಿವಾಸಿ ಶಿವಕುಮಾರ್(41) ಎನ್ನಲಾಗಿದೆ. ಮೃತರಿಗೆ ಪತ್ನಿ ಹಾಗೂ ಒಂದು ಮಗುವಿದೆ. ಈತ ಮೇ. 22 ರಂದು ತನ್ನ ಸ್ನೇಹಿತ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಮಹದೇವಸ್ವಾಮಿ ಎಂಬುವರ ಜೊತೆ ಚಾಮರಾಜನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಯಡಿಯೂರು ಗೇಟ್ ಶಂಕರದೇವರ ಬೆಟ್ಟದ ಬಳಿ ಮಿಲಿಟರಿ ವಾಹನ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರರಿಬ್ಬರಿಗೂ ತೀವ್ರ ಗಾಯಗಳಾಗಿವೆ.
ನಂತರ ಇವರನ್ನು ಚಾಮರಾಜನಗರ ಯಡಬೆಟ್ಟದಲ್ಲಿರುವ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಶಿವಕುಮಾರ್‌ಗೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತರಾಗಿದ್ದಾರೆ. ಚಾಮರಾಜನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ವಹಿಸಿದ್ದಾರೆ.