ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಕೊಠಡಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಶಿಕ್ಷಕರ ಜತೆ ಚರ್ಚಿ ಸಿದರು. ಬಿಇಒ ಮಂಜುಳಾ, ಮುಖ್ಯ ಶಿಕ್ಷಕಿ ವಸುಂದರಾ, ಶಿಕ್ಷಕ ಚಿಕ್ಕರಾಜು, ವೆಂಕಟೇಶ್, ನಾಗಮಣಿ, ಪ್ರಭುರಾಜು, ನಟೇಶ್ ಇತರರು ಇದ್ದರು.
- ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ಕಂಡು ಮೆಚ್ಚುಗೆ
- ಅಗತ್ಯ ಮೂಲ ಸೌಲಭ್ಯಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ
ಕೊಳ್ಳೇಗಾಲ: ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಸಿಎಸ್‌ಆರ್ ಅನುದಾನದಡಿ ಮೇಲ್ದರ್ಜೆಗೇರುತ್ತಿರುವ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಪರಿಶೀಲಿಸಿದರು.
ಪ್ರಾಥಮಿಕ ಶಾಲೆ ಕೊಠಡಿ, ಅಡುಗೆ ಮನೆ, ಶಾಲಾ ಮಕ್ಕಳೇ ಬಿಸಿ ಊಟ ಕಾರ್ಯಕ್ರಮಕ್ಕಾಗಿ ನಿರ್ಮಿಸಿರುವ ಕೈತೋಟವನ್ನು ವೀಕ್ಷಿಸಿದರು. ಶಾಲಾ ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ಕೊಠಡಿಗಳನ್ನು ಪರಿಶೀಲಿಸಿದರು. ಶಾಲೆಯಲ್ಲಿ 368 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜತೆಗೆ ಶಾಲೆಗೆ ಅಗತ್ಯವಿರುವ ಮೂಲ ಸೌಲಭ್ಯಗಳಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
ಈ ವೇಳೆ ಪ್ರೌಢಶಾಲಾ ಶಿಕ್ಷಕರ ಸಭೆ ನಡೆಸಿ ಮಕ್ಕಳಲ್ಲಿ ಬಾಲ್ಯ ವಿವಾಹ ತಡೆ ಪೋಕ್ಸೋ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿ ಮಕ್ಕಳಲ್ಲಿ ಮತ್ತು ಪಾಲಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಬಿಇಒ ಮಂಜುಳಾ, ಮುಖ್ಯ ಶಿಕ್ಷಕಿ ವಸುಂದರಾ, ಶಿಕ್ಷಕ ಚಿಕ್ಕರಾಜು, ವೆಂಕಟೇಶ್, ನಾಗಮಣಿ, ಪ್ರಭುರಾಜು, ನಟೇಶ್ ಇತರರು ಇದ್ದರು.