ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ರಾಜ್ಯ ರೈತ ಸಂಘದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು. ಹೊನ್ನೂರು ಬಸವಣ್ಣ, ಗೌಡೇಗೌಡ, ದಿಲೀಪ್, ಮಹದೇವಪ್ರಸಾದ್, ಲೋಕೇಶ್ ಮತ್ತು ಇತರರು ಇದ್ದರು.
- ರೈತ ಮುಖಂಡ ಹೊನ್ನೂರು ಬಸವಣ್ಣ ಹೇಳಿಕೆ
- ಪಾದಯಾತ್ರೆ ಬಂದ ರೈತರಿಗೆ ಜಿಲ್ಲಾಡಳಿತದಿಂದ ಸಿಗದ ಸ್ಪಂದನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿತಿ ಗುಂಡ್ಲುಪೇಟೆಯಿಂದ ಚಾಮರಾಜನಗರಕ್ಕೆ ಪಾದಯಾತ್ರೆ ಬಂದ ರೈತರಿಗೆ ಜಿಲ್ಲಾಡಳಿತ ಸ್ಪಂದಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡ ಹೊನ್ನೂರು ಬಸವಣ್ಣ ಸ್ವಾಂತ್ರ್ಯ ದಿನಾಚರಣೆಯಂದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಜಿಲ್ಲೆಯನ್ನು ಬರ ಪೀಡಿತವೆಂದು ೋಷಣೆ ಮಾಡಬೇಕು. ಕೆರೆಗಳಿಗೆ ನೀರು ತುಂಬಿಸಬೇಕು, ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಗುಂಡ್ಲುಪೇಟೆಯಿಂದ ಚಾಮರಾಜನಗರಕ್ಕೆ ಪಾದಯಾತ್ರೆಯಲ್ಲಿ ಸೋಮವಾರ ಬಂದ ರೈತರು ಜಿಲ್ಲಾಡಳಿತ ಭವನದ ಮುಂಭಾಗವೇ ರಾತ್ರಿ ಕಳೆದರು. ಜಿಲ್ಲಾಡಳಿತ ರೈತರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆಕ್ರೋಶಗೊಂಡು ಮಂಗಳವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ರೈತರ ಪ್ರತಿಭಟನೆಗೆ ಕೈಜೋಡಿಸಿದ ಮುಖಂಡ ಹೊನ್ನೂರು ಬಸವಣ್ಣ ಮಾತನಾಡಿ, ಪಾದಯಾತ್ರೆಯಲ್ಲ ಬಂದ ರೈತರಿಂದ ಮನವಿ ಆಲಿಸಿ ಸೂಕ್ತ ಕ್ರಮವಹಿಸುವುದಾಗಿ ಅಧಿಕಾರಿಗಳು ತಿಳಿಸಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಸಂಘಟನೆಗಳ ಮುಖಂಡರೊಂದಿಗೆ ಮಾತನಾಡಿ ಆ.15ರಂದು ಪ್ರತಿಭಟನೆ ನಡೆಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಗೌಡೇಗೌಡ, ಪ್ರಧಾನ ಕಾರ್ಯದರ್ಶಿ ಮಹದೇವಪ್ರಸಾದ್, ಕಾರ್ಯಾಧ್ಯಕ್ಷ ಮಹದೇವಪ್ಪ, ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ದಿಲೀಪ್, ಪ್ರಧಾನ ಕಾರ್ಯದರ್ಶಿ ಬೊಮ್ಮನಹಳ್ಳಿ ಲೋಕೇಶ್, ಕೊಡಗು ಅಧ್ಯಕ್ಷ ಮನಸೋಮಯ್ಯ ಮತ್ತು ಇತರರು ಭಾಗವಹಿಸಿದ್ದರು.