ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಬೀದಿನಾಯಿಗಳ ದಾಳಿಗೆ ತುತ್ತಾಗುತ್ತಿದ್ದ ಜಿಂಕೆಯನ್ನು ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆ ವಶಕ್ಕೆ ನೀಡಿದರು.
ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿಯಲ್ಲಿ ಬೀದಿನಾಯಿಗಳ ದಾಳಿಗೆ ತುತ್ತಾಗುತ್ತಿದ್ದ ಜಿಂಕೆಯನ್ನು ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆ ವಶಕ್ಕೆ ನೀಡಿದರು.
ಗುರುವಾರ ಬೆಳಗ್ಗೆ ಗ್ರಾಮದ ಪೊಲೀಸ್ ಠಾಣೆ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ದಾಳಿಗೆ ತುತ್ತಾಗಿದ್ದ ಸುಮಾರು 5 ವರ್ಷದ ಜಿಂಕೆಯನ್ನು ಸಾರ್ವಜನಿಕರು ರಕ್ಷಿಸಿ ಅರಣ್ಯ ಇಲಾಖೆಯ ಬಫರ್ ವಲಯದ ಸಿಬ್ಬಂದಿ ವಶಕ್ಕೆ ನೀಡಿದರು.
ನಾಯಿಗಳ ಕಡಿತದಿಂದ ಗಾಯಗಳಾಗಿದ್ದ ಜಿಂಕೆಗೆ ಚಿಕಿತ್ಸೆ ಕೊಡಿಸಲು ಅರಣ್ಯ ಸಿಬ್ಬಂದಿ ವೈದ್ಯರ ಬಳಿಗೆ ಕೊಂಡೊಯ್ಯುವಾಗ ಮಾರ್ಗದಲ್ಲಿಯೇ ಮೃತಪಟ್ಟಿತು. ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ನಂತರ ಸುಟ್ಟುಹಾಕಲಾಯಿತು ಎಂದು ಬಫರ್ ವಲಯದ ಆರ್‌ಎಫ್‌ಒ ಶಿವಕುಮಾರ್ ತಿಳಿಸಿದ್ದಾರೆ.