ಹನೂರಿನಿಂದ ಚಿಂಚಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ದುಸ್ಥಿತಿ.
- ಸರ್ಕಾರಕ್ಕೆ ಗ್ರಾಮಸ್ಥರ ಒತ್ತಾಯ
ಹನೂರು: ಪಟ್ಟಣದಿಂದ ಚಿಂಚಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹದಗೆಟ್ಟಿದ್ದು. ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪಟ್ಟಣದಿಂದ 4 ಕಿ.ಮೀ ಅಂತರವನ್ನು ಹೊಂದಿರುವ ಈ ರಸ್ತೆಯು ಚಿಂಚಳ್ಳಿ, ಅಲಗುಮೂಲೆ ಹಾಗೂ ಈ ಭಾಗದ ಇನ್ನಿತರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ಈ ರಸ್ತೆಯನ್ನು ಹಲವು ದಶಕದ ಹಿಂದೆ ಡಾಂಬರೀಕರಣಗೊಳಿಸಲಾಗಿತ್ತು. ಆದರೆ ಕಳೆದ ಏಳೆಂಟು ವರ್ಷದಿಂದ ಸಂಪೂರ್ಣ ಹದಗರಟ್ಟಿದೆ. ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಹಲವು ವರ್ಷಗಳಿಂದಲೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ನಿತ್ಯ ಸಮಸ್ಯೆಯನ್ನು ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಇನ್ನಾದರೂ ಇತ್ತ ಗಮನಹರಿಸಿ ರಸ್ತೆಯನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.