ಸೆಂಟ್ ಮೇರಿಸ್ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ದುಸ್ಥಿತಿ.  
ಚಾಮರಾಜನಗರ

ರಸ್ತೆ ಅಭಿವೃದ್ಧಿ ಪಡಿಸಿ

ಪ್ರಜ್ವಲ್.ಎನ್

ಪ್ರಮುಖ ಮುಖ್ಯಾಂಶಗಳು

  • ಮಾರ್ಟಳ್ಳಿ ಗ್ರಾಮಸ್ಥರ ಒತ್ತಾಯ
ಹನೂರು: ಮಾರ್ಟಳ್ಳಿ ಗ್ರಾಮದಿಂದ ಸೆಂಟ್ ಮೇರಿಸ್ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಹದಗೆಟ್ಟಿದ್ದು ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳು ಈ ರಸ್ತೆಯ ಮೂಲಕವೇ ಸಾಗಬೇಕಿದೆ. ಕೆಲವು ವರ್ಷದ ಹಿಂದೆ ಡಾಂಬರೀಕರಣ ಕಂಡಿದ್ದ ಈ ರಸ್ತೆಯು ಸಂಪೂರ್ಣ ಹಾಳಾಗಿದೆ. ಜಲ್ಲಿಕಲ್ಲುಗಳು ಹರಡಿಕೊಂಡಿವೆ. ಇದರಿಂದ ವಿದ್ಯಾರ್ಥಿಗಳು ತೆರಳಲು ಸಮಸ್ಯೆ ಅನುಭವಿಸುವಂತಾಗಿದೆ. ಇತ್ತ ಬೈಕ್ ಸವಾರರು ಪರದಾಡುವಂತ ವಾತವರಣ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.