ಗುಂಡ್ಲುಪೇಟೆಯಲ್ಲಿ ಆಯೋಜಿಸಿದ್ದ ಎಚ್.ಎಸ್.ಮಹದೇವಪ್ರಸಾದ್ ಕಾರ್ಯಕ್ರಮದಲ್ಲಿ ಎಚ್.ಎಸ್.ಮಹದೇವಪ್ರಸಾದ್ ಅವರ ಭಾವಚಿತ್ರಕ್ಕೆ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ ಪುಷ್ಪಾರ್ಚನೆ ಮಾಡಿದರು.
ಮಾಜಿ ಸಚಿವ ದಿ.ಮಹದೇವಪ್ರಸಾದ್ ಅವರ ಅವಧಿಯಲ್ಲಿನ ಶಾಶ್ವತ ಕೆಲಸಗಳಿಂದ ಜನರು ಅವರನ್ನು ಇಂದಿಗೂ ಸ್ಮರಿಸುತ್ತಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ತಿಳಿಸಿದರು.
ಎಚ್.ಎಸ್.ಮಹದೇವಪ್ರಸಾದ್ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಪಟ್ಟಣದ ಎಂಸಿಡಿಸಿಸಿ ಬ್ಯಾಂಕ್ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಅಧಿಕಾರ ಯಾರಿಗೂ ಶಾಶ್ವತವಲ್ಲ. ಆದರೆ, ಅಧಿಕಾರಾವಧಿಯಲ್ಲಿ ಎಷ್ಟೆಲ್ಲ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯ ಎಂಬುದನ್ನು ಮಹದೇವಪ್ರಸಾದ್ ಮಾಡಿ ತೋರಿಸಿದ್ದಾರೆ. ಈ ಕಾರಣಕ್ಕೆ ಸ್ವ ಪ್ರೇರಣೆಯಿಂದ ಅಭಿಮಾನಿಗಳು ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ. ಸಾಕಷ್ಟು ಜನರು ವಿವಿಧ ರೀತಿಯಲ್ಲಿ ಅವರನ್ನು ಗುಣಗಾನ ಮಾಡಿದ್ದಾರೆ ಎಂದರು.