ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ.ಪಿ.ದೇವರಾಜು, ಕುಮಾರ್, ನಾಗರಾಜು ಇತರರು ಇದ್ದರು. 
ಚಾಮರಾಜನಗರ

ಶೈಕ್ಷಣಿಕ ವ್ಯವಸ್ಥೆ ಬಲಗೊಳಿಸಿದ ಧೀಮಂತ

ಮಾದೇಶ್ ತಿ.ನರಸೀಪುರ

ಕೊಳ್ಳೇಗಾಲ:

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶೈಕ್ಷಣಿಕ ವ್ಯವಸ್ಥೆಯನ್ನು ಗಟ್ಟಿಗೊಳಿಸಿದರು ಎಂದು ಚಾಮರಾಜನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಪಿ.ದೇವರಾಜು ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.
ಭಾರತದ ಪ್ರಜಾಪ್ರಭುತ್ವ ದೊಡ್ಡ ಸವಾಲುಗಳನ್ನು ಎದರಿಸುತ್ತಿದೆ. ಜಾತೀಯತೆ, ಅಸ್ಪಶ್ಯತೆ ಇಡೀ ದೇಶದ ಐಕ್ಯವನ್ನು ಪ್ರಶ್ನಿಸುವ ನಿಟ್ಟಿನಲ್ಲಿ ಬೆಳೆಯುತ್ತಿದೆ. ಈ ಪಿಡುಗುಗಳು ಅಖಂಡ ಭಾರತದ ಭವಿಷ್ಯಕ್ಕೆ ಪೆಟ್ಟಾಗಿದೆ ಹಾಗಾಗಿಯೇ ಶಿಕ್ಷಣದಿಂದ ಮಾತ್ರ ಈ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಧ್ಯ ಎಂಬುದನ್ನು ತಿಳಿದು ಡಿ.ದೇವರಾಜ ಅರಸು ಅವರು ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದರು ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಶಿರೆಸ್ತೇದಾರ್ ಕೃಪಾಕರ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಿ.ಮೀನಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಕಸಾಪ ಅಧ್ಯಕ್ಷ ನಾಗರಾಜು ಇತರರು ಇದ್ದರು.