ಯಳಂದೂರಿನಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಎಚ್.ವಿ. ಚಂದ್ರು, ಲಿಂಗರಾಜಮೂರ್ತಿ, ಗುಂಬಳ್ಳಿ ರಾಜಣ್ಣ ಇದ್ದರು.  
ಚಾಮರಾಜನಗರ

ಧ್ರುವನಾರಾಯಣ ಮಾದರಿ ರಾಜಕಾರಣಿ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ ಮಾದರಿ ರಾಜಕಾರಣಿ
  • ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು
ಯಳಂದೂರು: ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ ಮಾದರಿ ರಾಜಕಾರಣಿಯಾಗಿದ್ದು, ಇವರು ತಮಗೆ ವಹಿಸಿದ ಜವಾಬ್ದಾರಿಯನ್ನು ಚಾಚೂ ತಪ್ಪದೆ ಮಾಡುತ್ತಿದ್ದರು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಬಣ್ಣಿಸಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಧ್ರುವನಾರಾಯಣ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಧ್ರುವನಾರಾಯಣ ಶಾಸಕ, ಸಂಸದರಾಗಿ ಅನೇಕ ಜನಪರ ಕೆಲಸ ಮಾಡಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ರಾಜ್ಯದ ವಿವಿಧ ಮೂಲೆಗಳಲ್ಲಿ ಸಂಚರಿಸುವ ಮೂಲಕ ಕೊಡಗು, ಮಂಗಳೂರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದರು. ಇಂತಹ ಅಪರೂಪದ ರಾಜಕಾರಣಿ ಇತರರಿಗೂ ಮಾದರಿಯಾಗಲಿ ಎಂದರು.
ಪಪಂ ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ಮಾಜಿ ಸದಸ್ಯ ಬಿ. ರವಿ ಬಿಳಿಗಿರಿರಂಗನಾಥಸ್ವಾಮಿ ದೇಗುಲ ವ್ಯವಸ್ಥಾಪನಾ ಸಮಿತಿ ಸದಸ್ಯ ಗುಂಬಳ್ಳಿ ರಾಜಣ್ಣ ಮುಖಂಡರಾದ ಪ್ರಕಾಶ್, ಮಲ್ಲು ಸೇರಿದಂತೆ ಅನೇಕರು ಇದ್ದರು.