ಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಳ್ಳೇಗಾಲ ರೋಟರಿ ಸಂಸ್ಥೆ ವತಿಯಿಂದ ಊಟದ ತಟ್ಟೆ ವಿತರಿಸಲಾಯಿತು. ಮಂಜುನಾಥ್, ಮಹದೇವ, ನಂಜುಂಡಸ್ವಾಮಿ, ಚಿನ್ನಪ್ಪ ಮತ್ತಿತರರಿದ್ದರು.
ಹನೂರು: ತಾಲೂಕಿನ ಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೂ ಸೋಮವಾರ ಕೊಳ್ಳೇಗಾಲ ರೋಟರಿ ಸಂಸ್ಥೆ ವತಿಯಿಂದ ಊಟದ ತಟ್ಟೆಯನ್ನು ವಿತರಿಸಲಾಯಿತು.
ಈ ವೇಳೆ ದಾನಿ ರೋಟರಿ ಸಂಸ್ಥೆ ಸದಸ್ಯ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ದೇಶದ ಭವಿಷ್ಯವನ್ನು ರೂಪಿಸುವ ರೂವಾರಿಗಳು. ಹಾಗಾಗಿ ದೇಶದ ಅಭಿವೃದ್ಧಿಯಲ್ಲಿ ಇವರ ಪಾತ್ರ ಹಿರಿದು. ಹಾಗಾಗಿ ಸರ್ಕಾರ ಹಲವು ಸವಲತ್ತುಗಳನ್ನು ಒದಗಿಸುವುದರ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕೆ ಪೂರಕವಾಗಿ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಬಿಸಿಯೂಟಕ್ಕೆ ಅನುಕೂಲವಾಗುವಂತೆ ಮಕ್ಕಳಿಗೆ ಊಟದ ತಟ್ಟೆಯನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆ ಜತೆಗೆ ಓದಿನ ಕಡೆ ಹೆಚ್ಚಿನ ಒತ್ತು ನೀಡಬೇಕು. ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆ ಅಧ್ಯಕ್ಷ ಮಹದೇವ, ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಕಾರ್ಯದರ್ಶಿ ಪ್ರಕಾಶ್, ಸಹನಾ ವಿದ್ಯಾಸಂಸ್ಥೆಯ ನಂಜುಂಡಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ಚಿನ್ನಪ್ಪ, ಮುಖ್ಯ ಶಿಕ್ಷಕಿ ಮಹದೇವಮ್ಮ, ಶಿಕ್ಷಕರಾದ ಮಹದೇವ, ಚಿನ್ನರಾಜು, ಗಿರೀಶ್, ಸುಜಾತಾ, ಮಹಾಲಕ್ಷ್ಮೀ ಹಾಗೂ ಇನ್ನಿತರರು ಇದ್ದರು.