ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದ ಅರಿವು ಕೇಂದ್ರದಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರದಲ್ಲಿನ ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಮಮತಾ, ಮಂಜುಳಾ, ವೃಷಭೇಂದ್ರ ಇತರರಿದ್ದರು. 
ಚಾಮರಾಜನಗರ

ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಣೆ

ಗುಂಡ್ಲುಪೇಟೆ: ತಾಲೂಕಿನ ನೇನೇಕಟ್ಟೆ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಡಿಜಿಟಲ್ ಲೈಬ್ರರಿ ಅರಿವು ಕೇಂದ್ರದಲ್ಲಿ ಶಿಕ್ಷಣ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ 30 ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಭಾನುವಾರ ಆಯೋಜಿಸಲಾಗಿತ್ತು.
ನೇನೇಕಟ್ಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಿಸಿ ಶಿಬಿರದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಗ್ರಂಥಾಲಯದ ಗ್ರಂಥಪಾಲಕಿ ಮಂಜುಳಾ, ಶಿಕ್ಷಣ ಫೌಂಡೇಷನ್‌ನ ಮಾರ್ಗದರ್ಶಕ ವೃಷಭೇಂದ್ರ ಇತರರಿದ್ದರು.