ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ಡಿಸಿ ಶ್ರೀರೂಪಾ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದರು. ರಾಮಚಂದ್ರಯ್ಯ, ಜಯೇಂದ್ರ, ರಂಗನಾಥ್ ಮತ್ತು ಇತರರು ಹಾಜರಿದ್ದರು. 
ಚಾಮರಾಜನಗರ

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ

ಪ್ರಮುಖ ಮುಖ್ಯಾಂಶಗಳು

  • ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ
  • ಸಿಎಸ್‌ಆರ್ ನೆರವಿನಡಿ ಅಂಗವಿಲರಿಗೆ ತ್ರಿಚಕ್ರ ವಾಹನ ನೀಡುವಂತೆ ಕಾರ್ಮಿಕ ಇಲಾಖೆ ವತಿಯಿಂದ ಉದ್ಯಮಗಳಿಗೆ ಪತ್ರ
ಚಾಮರಾಜನಗರ: ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸುವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು.
ಸಿಎಸ್‌ಆರ್ ನೆರವಿನಡಿ ಅಂಗವಿಲರಿಗೆ ತ್ರಿಚಕ್ರ ವಾಹನ ನೀಡುವಂತೆ ಕಾರ್ಮಿಕ ಇಲಾಖೆ ವತಿಯಿಂದ ಉದ್ಯಮಗಳಿಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಎಲೆಕ್ಟ್ರಾನಿಕ್ ಮಾನ್ಯುಫ್ಯಾಕ್ಚರಿಂಗ್ ಹಾಗೂ ಕಲರ್ ಟೋನ್ ಟೆಕ್ಸ್ಟೈಲ್ ಪ್ರೈಲಿಮಿಟೆಡ್ ಅಂಗವಿಕಲರಿಗೆ ಎರಡು ತ್ರಿಚಕ್ರ ವಾಹನಗಳನ್ನು ನೀಡಿವೆ. ಈ ವಾಹನಗಳನ್ನು ಇಂದು ಇಬ್ಬರು ವಿಶೇಷಚೇತನ ಫಲಾನುಭವಿಗಳಿಗೆ ಗಣ್ಯರು ವಿತರಿಸಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರಯ್ಯ, ಜಯೇಂದ್ರ, ರಂಗನಾಥ್ ಹೇಮಂತ್ ಇದ್ದರು.