ಪಟ್ಟಣದ ಭೀಮನಗರದ ಪಾಲ್‌ಚಾವಡಿ ಬೀದಿಯಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಮಾಡಲಾಯಿತು. 
ಚಾಮರಾಜನಗರ

ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ

ರವಿಕುಮಾರ್ ಪಿ. ಕೆ

ಪ್ರಮುಖ ಮುಖ್ಯಾಂಶಗಳು

  • ನಗರಸಭೆ ಮಾಜಿ ಅಧ್ಯಕ್ಷೆ ರೇಖಾ ಅಭಿಮತ
ಕೊಳ್ಳೇಗಾಲ: ಪಟ್ಟಣದ ಭೀಮನಗರದ ಪಾಲ್‌ಚಾವಡಿ ಬೀದಿಯಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಮಾಡಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ನಗರಸಭೆ ಮಾಜಿ ಅಧ್ಯಕ್ಷೆ ರೇಖಾ ರಮೇಶ್ ಸೇರಿದಂತೆ ಮುಖಂಡರು ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಅನ್ನದಾನ ಮಾಡಲಾಯಿತು.
ನಗರಸಭೆ ಮಾಜಿ ಅಧ್ಯಕ್ಷೆ ರೇಖಾ ರಮೇಶ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಅಂಬೇಡ್ಕರ್ ಚಿಂತನೆಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು. ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಮನೋಭಾವನೆ ಬೆಳೆಸಿಕೊಳ್ಳಬೇಕು. ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.
ಭೀಮನಗರ ದೊಡ್ಡ ಯಜಮಾನ ಚಿಕ್ಕಮಾಳಿಗೆ, ಮಾಜಿ ಯಜಮಾನ ಶಿವರಾಳ, ಮಾಜಿ ಸದಸ್ಯ ಮಂಜುನಾಥ್, ಮುಖಂಡರಾದ ಎನ್.ನಟರಾಜು, ಪಿ.ಜಗದೀಶ್, ಡೈರಿ ಮೂರ್ತಿ, ಸ್ವಾಮಿ, ದೇವು ಅಪ್ಪು, ಶಾಂತರಾಜು, ಕೃಷ್ಣಪ್ಪ, ರಾಜೇಶ್, ಪಿ.ಕೃಷ್ಣರಾಜ್, ಸುರೇಶ್ ಇತರರು ಇದ್ದರು.