ಕೌದಳ್ಳಿಯ 3ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ನಿವಾಸಿಗಳು ಗ್ರಾಪಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.  
ಚಾಮರಾಜನಗರ

ಕುಡಿವ ನೀರಿಗೆ ಆಗ್ರಹಿಸಿ ಖಾಲಿ ಬಿಂದಿಗೆ ಪ್ರದರ್ಶನ

ಮಾದೇಶ್ ತಿ.ನರಸೀಪುರ

ಪ್ರಮುಖ ಮುಖ್ಯಾಂಶಗಳು

  • ಕೌದಳ್ಳಿ ಗ್ರಾಮದಲ್ಲಿ ಮಹಿಳೆಯರ ಪ್ರತಿಭಟನೆ
ಹನೂರು: ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಶನಿವಾರ ತಾಲೂಕಿನ ಕೌದಳ್ಳಿ ಗ್ರಾಮದ 3ನೇ ವಾರ್ಡ್‌ನ ನಿವಾಸಿಗಳು ಗ್ರಾಮ ಪಂಚಾಯಿತಿ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು.
ವಾರ್ಡ್‌ನಲ್ಲಿ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಮಹಿಳೆಯರು ಖಾಲಿ ಬಿಂದಿಗೆಯನ್ನು ಹಿಡಿದು ಗ್ರಾಪಂ ಕಚೇರಿಗೆ ಆಗಮಿಸಿದ್ದರು. ಆದರೆ ರಜೆ ಇದ್ದ ಕಾರಣ ಕಚೇರಿ ಬಾಗಿಲು ಹಾಕಿತ್ತು. ಇದರಿಂದ ಅಸಮಾಧಾನಗೊಂಡ ಮಹಿಳೆಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯರು ಮಾತನಾಡಿ, ವಾರ್ಡ್‌ನಲ್ಲಿ ವಿವಿಧ ಸಮುದಾಯ ಒಳಗೊಂಡಂತೆ ಸುಮಾರು 850ಕ್ಕೂ ಹೆಚ್ಚು ಕುಟುಂಬಗಳಿವೆ. ಕಳೆದ ಒಂದು ತಿಂಗಳಿನಿಂದಲೂ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದೀಗ ತೀವ್ರವಾಗಿದೆ. ಇದರಿಂದ ನೀರಿಗಾಗಿ ಕೂಲಿ ಕೆಲಸವನ್ನು ಬಿಟ್ಟು ಬಿಂದಿಗೆಯನ್ನಿಡಿದು ಅಲೆಯುವಂತಾಗಿದೆ. ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಯಾವುದೇ ಕ್ರಮವಾಗಿಲ್ಲ. ಇದರಿಂದ ವಾರ್ಡ್‌ನಲ್ಲಿ ಕುಡಿಯುವ ನೀರಿನದ್ದೇ ಒಂದು ದೊಡ್ಡ ಸಮಸ್ಯೆಯಾಗಿದ್ದು, ನಿತ್ಯ ತೊಂದರೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಕ್ರಮವಹಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.