ಕೊಳ್ಳೇಗಾಲದ ಸರ್ಕಾರಿ ನ್ಯಾಷನಲ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸಮಾರಂಭಕ್ಕೆ ತಾಪಂ ಇಒ ಗುರುಶಾಂತಪ್ಪ ಬೆಳ್ಳುಂಗಡಿ ಚಾಲನೆ ನೀಡಿದರು. ಮಂಜುಳಾ, ಮಹದೇವಕುಮಾರ್, ಜೋಸೆಫ್ ಅಲೆಕ್ಸಾಂಡರ್, ಚಿಕ್ಕರಾಜು, ಪ್ರಕಾಶ್, ನಾಗರತ್ನ, ಚಂದ್ರಶೇಖರ್ ಇದ್ದರು.
- ಪಾಲಕರಿಗೆ ತಾಲೂಕು ಪಂಚಾಯಿತಿ ಇಒ ಗುರುಶಾಂತಪ್ಪ ಬೆಳ್ಳುಂಡಗಿ ಸಲಹೆ
ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ನ್ಯಾಷನಲ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಶಾಲಾ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿತ್ತು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಆಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ. ಪಾಲಕರು ಸ್ಥಳೀಯ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು. ಶಾಲೆಯಲ್ಲಿ ಎಸ್‌ಡಿಎಂಸಿ ಸಮತಿ ಇದ್ದು, ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳ ಪಾಲಕರೇ ಸಮಿತಿಗೆ ಅಧ್ಯಕ್ಷ ಹಾಗೂ ಸದಸ್ಯರಾಗಿರುತ್ತಾರೆ. ಇದರಿಂದ ಶಾಲೆಯ ಶಿಕ್ಷಣ ವ್ಯವಸ್ಥೆಯನ್ನು ಪಾಲಕರು ನೋಡಬಹುದಾಗಿದೆ ಎಂದರು.
ಇದಕ್ಕೂ ಮುನ್ನ 2025-26 ನೇ ಸಾಲಿನ ಶಾಲಾ ವಾರ್ಷಿಕ ವರದಿಯನ್ನು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್ ಮಂಡಿಸಿದರು. ಸಂವಿಧಾನ ಪೀಠಿಕೆಯನ್ನು ಸಹ ಶಿಕ್ಷಕ ಬಸವರಾಜು ಭೋದಿಸಿದರು. ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮನಡೆಯಿತು.
ವಿವಿಧ ಕ್ರೀಡೆಯಲ್ಲಿ ವಿಜೇತರಾದ ಮಕ್ಕಳು ಹಾಗೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಹದೇವಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಕಾರ್ಯದರ್ಶಿ ಚಿಕ್ಕರಾಜು, ನಿರ್ದೇಶಕ ಪ್ರಕಾಶ್, ಉಪಖಜಾನಾಧಿಕಾರಿ ನಾಗರತ್ನಾ, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯೆ ಅಮೃತಾ, ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಕ್ಬರ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್, ಬಿಆರ್‌ಪಿ ಹೀನಾ ಕೌಸರ್, ಅನಿತಾ, ಸಿ.ಆರ್.ಪಿ ಸಮೀರಾ, ಗ್ರಾಮೀಣ ಶಿಕ್ಷಕರ ಸಂಘದ ಸಂತೋಷ್ ಕುಮಾರ್ ಮತ್ತಿತರರಿದ್ದರು.