ಕೊಳ್ಳೇಗಾಲ ಪಟ್ಟಣದ ಲಯನ್ಸ್ ಕ್ಲಬ್‌ನಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಹೃದಯ ತಪಾಸಣಾ ಶಿಬಿರ ನಡೆಸಲಾಯಿತು. 
ಚಾಮರಾಜನಗರ

ಹೃದಯದ ಆರೋಗ್ಯಕ್ಕೆ ವ್ಯಾಯಾಮ ಅಗತ್ಯ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ವ್ಯೆದ್ಯ ಡಾ.ಕೇಶವಮೂರ್ತಿ ಹೇಳಿಕೆ
ಕೊಳ್ಳೇಗಾಲ: ಪಟ್ಟಣದ ಲಯನ್ಸ್ ಕ್ಲಬ್‌ನಲ್ಲಿ ಇತ್ತೀಚೆಗೆ ಲಯನ್ಸ್ ಸಂಸ್ಥೆ ವತಿಯಿಂದ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಶಿಬಿರಕ್ಕೆ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯೆದ್ಯ ಡಾ.ಕೇಶವಮೂರ್ತಿ ಚಾಲನೆ ನೀಡಿ ಮಾತನಾಡಿ, ದೇಹದಲ್ಲಿರುವ ಎಲ್ಲ ಅಂಗಾಗಗಳು ಆರೋಗ್ಯದಿಂದ ಇರಬೇಕಾದರೆ ನಮ್ಮ ದಿನ ನಿತ್ಯದ ಜೀವನ ಶೈಲಿಯನ್ನು ಉತ್ತಮವಾಗಿಸಿಕೊಳ್ಳಬೇಕು. ಅದರಲ್ಲೂ ವಿಶೇಷವಾಗಿ ಹೃದಯದ ಆರೋಗ್ಯಕ್ಕೆ ಉತ್ತಮ ಆಹಾರ ಹಾಗೂ ವ್ಯಾಯಾಮ ಅಗತ್ಯವಾಗಿದೆ. ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯವಾಗಿದೆ ಎಂದರು.
ಶಿಬಿರದಲ್ಲಿ 96 ಜನರನ್ನು ಹೃದಯ ತಪಾಸಣೆಗೆ ಒಳಪಡಿಸಲಾಯಿತು. ಡಾ.ಹರ್ಷಿತ್, ಲಯನ್ಸ್ ಕ್ಲಬ್ ಅಧ್ಯಕ್ಷ ಮಾದೇಶ್, ಕಾರ್ಯದರ್ಶಿ ವಿರೂಪಾಕ್ಷ ಸ್ವಾಮಿ, ಮಾಜಿ ಅಧ್ಯಕ್ಷ ಎಸ್.ನಾಗರಾಜು ಕೊಂಗರಹಳ್ಳಿ, ನಿರ್ದೇಶಕ ಚೆನ್ನ ಮಾದೇಗೌಡ, ಜಿಎಸ್‌ಎಂ ಪ್ರಸಾದ್, ನಾಗಬಸವ ಲಿಂಗಪ್ಪ, ಎಂ.ಎಸ್ ನಾಗರಾಜಪ್ಪ, ಶ್ರೀನಿವಾಸ್ ಮೂರ್ತಿ ಇತರರು ಇದ್ದರು.