ಕೊಳ್ಳೇಗಾಲ ಪಟ್ಟಣದ ಶ್ರೀ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ವ್ಯೆದ್ಯರು ತಪಾಸಣೆ ಮಾಡಿದರು.
- ಕಣ್ಣಿನ ತಪಾಸಣೆ ಶಿಬಿರ
- ಬೆಂಗಳೂರು ಸಿಸಿಬಿ ವಿಭಾಗದ ಮಹಾನಂದ್ ಕೃಷ್ಣಸ್ವಾಮಿ
- ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಚಾರಿ ಟೇಬಲ್ ಟ್ರಸ್ಟ್
- ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆ
- ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗ
ಕೊಳ್ಳೇಗಾಲ: ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಚಾರಿ ಟೇಬಲ್ ಟ್ರಸ್ಟ್, ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಗಳು, ರೋಟರಿ ಮಿಡ್- ಟೌನ್ ಹಾಗೂ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ಪಟ್ಟಣದ ಶ್ರೀ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಬೆಂಗಳೂರು ಸಿಸಿಬಿ ವಿಭಾಗದ ಮಹಾನಂದ್ ಕೃಷ್ಣಸ್ವಾಮಿ ಮಾತನಾಡಿ, ನನ್ನ ತಂದೆಯ ಆಸೆಯಂತೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ತಾಯಿ ಪ್ರೇಮಲತಾ ಕೃಷ್ಣಸ್ವಾಮಿ ಮತ್ತು ಕುಟುಂಬ ವರ್ಗ ಮಾಡುತ್ತಿದೆ. ಇದರ ಭಾಗವಾಗಿ ಪ್ರತಿ ತಿಂಗಳ ಎರಡನೇ ಭಾನುವಾರ ನೇತ್ರ ಹಾಗೂ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾ ಗುತ್ತದೆ. ಈ ಕಾರ್ಯಕ್ರಮ 41 ತಿಂಗಳು ಪೂರೈಸಿದ್ದು, ಸಾವಿರಾರು ಜನರಿಗೆ ಉಚಿತ ಶಸ್ತ್ರಚಿಕಿತ್ಸೆಯೊಂದಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ತಿಂಗಳ ಎರಡನೇ ಭಾನುವಾರ ನಡೆಯುವ ಉಚಿತ ನೇತ್ರ ನಿರಂತರ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇ ಕೆಂದು ಮನವಿ ಮಾಡಿದರು.
ಶಿಬಿರದಲ್ಲಿ 107 ಜನರು ತಪಾಸಣೆಗೆ ಒಳಪಟ್ಟಿದ್ದು ಅದರಲ್ಲಿ 51 ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಅರವಿಂದ ಕಣ್ಣಿನ ಆಸ್ಪತ್ರೆ ಕೊಯಮತ್ತೂರಿಗೆ ಆಯ್ಕೆ ಮಾಡಿ ಕಳುಹಿಸಿ ಕೊಡಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಸದಸ್ಯ ಶಿವಾನಂದ, ಮುಖಂಡ ನಾಗರಾಜ, ಅರವಿಂದ ಕಣ್ಣಿನ ಆಸ್ಪತ್ರೆಯ ಡಾ.ಸಾಯಿ ತೇಜ, ಡಾ.ಚಂದ್ರವರ್ಧನ್, ಅರವಿಂದ ಕಣ್ಣಿನ ಆಸ್ಪತ್ರೆಯ ಸಂಯೋಜಕ ವಿಜಯ್ ಕುಮಾರ್, ಅರವಿಂದ ಸಂಸ್ಥೆಯ ವ್ಯವಸ್ಥಾಪಕ ರವಿತೇಜ ಇದ್ದರು.