ಕಾಡಾನೆ ದಾಳಿಯಿಂದ ಗಾಯಗೊಂಡ ಅಂಕಪ್ಪಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. 
ಚಾಮರಾಜನಗರ

ಕಾಡಾನೆ ದಾಳಿಯಿಂದ ರೈತನಿಗೆ ಗಾಯ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • elephant attack
ಹನೂರು: ಚಿರತೆ ದಾಳಿಗೆ ಬಾಲಕನೊಬ್ಬ ಬಲಿಯಾದ ಬೆನ್ನಲ್ಲೇ ಸೋಮವಾರ ತಾಲೂಕಿನ ಮರೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಗಾಯಗೊಂಡಿದ್ದಾರೆ.
ಗ್ರಾಮದ ಅಂಕಪ್ಪಸ್ವಾಮಿ (70) ಗಾಯಗೊಂಡವರು. ಇವರು ಮಧ್ಯಾಹ್ನ ಜಮೀನಿನಲ್ಲಿ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಸಮೀಪದ ಅರಣ್ಯ ಪ್ರದೇಶದಿಂದ ಬಂದ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಅಂಕಪ್ಪಸ್ವಾಮಿ ಅವರ ಕಾಲು ಹಾಗೂ ಎದೆಯ ಭಾಗದಲ್ಲಿ ಗಾಯವಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಗಾಯಾಳನ್ನು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ಇತ್ತೀಚಿಗೆ ಕಾಡು ಪ್ರಾಣಿಗಳ ದಾಳಿಯಿಂದ ಪ್ರಾಣಹಾನಿ ಸಂಭವಿಸುತ್ತಿರುವ ಹಿನ್ನಲೆ ಮ.ಬೆಟ್ಟದ ತಪ್ಪಲಿನ ಪ್ರದೇಶದ ಜನರು ಆತಂಕಕ್ಕೆ ಒಳಗಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಂತೆ ಒತ್ತಾಯಿಸಿದ್ದಾರೆ.