ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ರಾಮಾಪುರಕ್ಕೆ ಬಾರದಿರುವುದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು.  
ಚಾಮರಾಜನಗರ

ರಾಮಾಪುರದಲ್ಲಿ ರೈತರ ಪ್ರತಿಭಟನೆ

ಮಾದೇಶ್ ತಿ.ನರಸೀಪುರ

ಪ್ರಮುಖ ಮುಖ್ಯಾಂಶಗಳು

  • ವೀಕ್ಷಣೆಗೆ ಡಿಸಿಎಂ ಬಾರದ ಹಿನ್ನೆಲೆ ಆಕ್ರೋಶ
ಹನೂರು: ತಾಲೂಕಿನ ರಾಮಾಪುರಕ್ಕೆ ಡಾ.ಜಿ.ಪರಮೇಶ್ವರ ಅವರು ಭೇಟಿ ನೀಡದ ಹಿನ್ನೆಲೆಯಲ್ಲಿ ಬುಧವಾರ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬರ ಪರಿಸ್ಥಿತಿ ಪರಿಶೀಲನೆಗಾಗಿ ಡಿಸಿಎಂ ಆಗಮಿಸುವ ಹಿನ್ನೆಲೆಯಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಮಸ್ಯೆಗಳ ಸಂಬಂಧ ಮನವಿ ಸಲ್ಲಿಸಲು ಕಾದಿದ್ದರು. ಆದರೆ, ಅವರು ಅಜ್ಜೀಪುರದ ಜಮೀನೊಂದಕ್ಕೆ ತೆರಳಿ ಬೆಳೆ ಹಾನಿ ಪರಿಶೀಲಿಸಿ ರಾಮಾಪುರಕ್ಕೆ ಆಗಮಿಸಿದೆ ಹಿಂದಿರುಗಿದರು. ಇದರಿಂದ ರೈತರು ಅಸಮಾಧಾನಗೊಂಡು ಪ್ರತಿಭಟನೆ ನಡೆಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಪಳನಿಸ್ವಾಮಿ ಮಾತನಾಡಿ, ಈ ಭಾಗದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಆದರೆ 490 ಕೋಟಿ ರೂ.ವೆಚ್ಚದ ಉಡುತೊರೆ ಜಲಾಶಯದ ನೀರಾವರಿ ಯೋಜನೆ ಕಾರ್ಯಗತಗೊಂಡಿಲ್ಲ. ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಪರಿಹಾರ ಸಂಬಂಧ ಉಪ ಮುಖ್ಯಮಂತ್ರಿ ಅವರಲ್ಲಿ ಮನವಿ ಸಲ್ಲಿಸಲು ಕಾದಿದ್ದೇವು. ಆದರೆ ಅಜ್ಜೀಪುರಕ್ಕೆ ಆಗಮಿಸಿ ರಾಮಾಪುರಕ್ಕೆ ಬಾರದಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.