ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಗ್ರಾಮದ ಕೃಷಿಪತ್ತಿನ ಸಹಕಾರ ಸಂಘದ ವತಿಯಿಂದ ್ಲ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣೇಶ್ ಪ್ರಸಾದ್ ಉದ್ಘಾಟಿಸಿದರು. ನಂಜುಂಡಪ್ರಸಾದ್, ನಂಜಪ್ಪ, ಮಡಿವಾಳಪ್ಪ, ಜಯರಾಂ ಇದ್ದರು.
- ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸಲಹೆ
ಗುಂಡ್ಲುಪೇಟೆ: ಸಹಕಾರ ಸಂಘಗಳಲ್ಲಿ ದೊರಕುವ ಸವಲತ್ತುಗಳನ್ನು ರೈತರು ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ತಾಲೂಕಿನ ಕಬ್ಬಹಳ್ಳಿ ಗ್ರಾಮದ ಕೃಷಿಪತ್ತಿನ ಸಹಕಾರ ಸಂಘದ ವತಿಯಿಂದ ಶನಿವಾರ ಗ್ರಾಮದ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮದ ಸಹಕಾರ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ಉತ್ತಮ ಕಾರ್ಯನಿರ್ವಹಿಸುತ್ತಿದ್ದು ಇದೇ ಮಾದರಿಯಲ್ಲಿ ಸದಸ್ಯರಿಗೆ ಹೆಚ್ಚಿನ ಸವಲತ್ತುಗಳನ್ನು ನೀಡಬೇಕು. ಜಿಲ್ಲಾ ಸಹಕಾರ ಬ್ಯಾಂಕ್‌ನಿಂದ ಕ್ಷೇತ್ರದ ಎಲ್ಲ ಸಹಕಾರ ಸಂಘಗಳಿಗೂ ಶೂನ್ಯಬಡ್ಡಿದರದಲ್ಲಿ ಹೆಚ್ಚಿನ ಸಾಲ ಕೊಡಿಸಲಾಗುವುದು ಎಂದು ಹೇಳಿದರು.
ಚಾಮುಲ್ ನಿರ್ದೇಶಕ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್ ಮಾತನಾಡಿ, ರೈತರಿಗೆ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ಹೆಚ್ಚಿನ ನೆರವಾಗುತ್ತಿದ್ದು, ಖಾಸಗಿ ಸಂಘಗಳಿಗೆ ಅವಕಾಶ ನೀಡದೆ ಉತ್ತಮ ಸೇವೆ ಸಲ್ಲಿಸಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲದ ನಿರ್ದೇಶಕ ಆಲತ್ತೂರು ಜಯರಾಂ, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ಜಿ.ಮಡಿವಾಳಪ್ಪ, ಮುದ್ದಯ್ಯ, ಕಬ್ಬಹಳ್ಳಿ ಗ್ರಾಮದ ಸಹಕಾರ ಸಂಘದ ಅಧ್ಯಕ್ಷ ದೀಪು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಸೇರಿದಂತೆ ಹಲವರು ಇದ್ದರು.