ಹನೂರು ಎಸ್‌ಬಿಐ ಶಾಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ನಂದಿಸಿದರು.  
ಚಾಮರಾಜನಗರ

ಶಾರ್ಟ್ ಸರ್ಕ್ಯೂಟ್‌

ಎ. ಆರ್. ರಘುರಾಮ
ಹನೂರು : ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿನ ಸ್ಟೇಟ್ ಬ್ಯಾಂಕ್ ಇಂಡಿಯಾ ಶಾಖೆಯಲ್ಲಿ ಗುರುವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ನಂದಿಸಿದರು.
ರಾತ್ರಿ 9ರ ವೇಳೆಯಲ್ಲಿ ಬ್ಯಾಂಕ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಇದ್ದಕ್ಕಿಂದತೆ ಮೂಲೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಕೂಡಲೇ ಎಚ್ಚೆತ್ತ ಬ್ಯಾಂಕ್ ವ್ಯವಸ್ಥಾಪಕ ಸುಕಾಂತ್ ಘೋಷ್ ಅವರು ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಿದರು. ಸ್ಥಳಕ್ಕಾಗಮಿಸಿದ ಠಾಣಾಧಿಕಾರಿ ಮಹೇಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವುದರ ಮೂಲಕ ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.