ಮರೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ. 
ಚಾಮರಾಜನಗರ

ಕಡಬೋಳಿ ಬೆಟ್ಟದಲ್ಲಿ ಬೆಂಕಿ

ಅಭಿನಯ್ ಎಚ್.ಎಂ
ಹನೂರು: ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮ ಬಳಿಯ ಕಡಬೋಳಿ ಬೆಟ್ಟದಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು ಸಾಕಷ್ಟು ಪ್ರಮಾಣದ ಅರಣ್ಯ ಪ್ರದೇಶ ನಾಶವಾಗಿದೆ.
ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಈ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 12ರ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ತಿಳಿದ ಗಸ್ತಿನಲ್ಲಿದ್ದ ಸಿಬ್ಬಂದಿ ಅಧಿಕಾರಿಗಳ ಗಮನಕ್ಕೆ ತಂದು ಬೆಂಕಿ ನಂದಿಸಲು ಮುಂದಾದರು. ಬಳಿಕ ಅಧಿಕಾರಿಗಳು ಹಾಗೂ ಹೆಚ್ಚಿನ ಸಿಬ್ಬಂದಿ ತಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ವ್ಯಾಪಿಸುತ್ತಿದ್ದ ಜ್ವಾಲೆಯನ್ನು ಸದ್ಯ ಹತೋಟಿಗೆ ತರಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.