ಕಾಮಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಹಾಗೂ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಭಾಗಿಯಾಗಿದ್ದರು. ಸಿದ್ದರಾಜು, ಪ್ರಸಾದ್, ಚಿಕ್ಕಸ್ವಾಮಿ ಇತರರಿದ್ದರು.
- ಶಾಸಕ ಎಂ.ಆರ್.ಮಂಜುನಾಥ್ ಅಭಿಮತ
ಹನೂರು: ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಸಾರ್ಥಕತೆ ಎನಿಸುತ್ತದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಸಮೀಪದ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬುದ್ಧ ಪೂರ್ಣಿಮೆ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.
ಈ ದೇಶ ಕಂಡಂತಹ ವಿಶ್ವಜ್ಞಾನಿ ಬಾಬಾ ಸಾಹೇಬ್ ಅಂಬೇಡ್ಕರ್. ಇವರು ಎಲ್ಲ ವರ್ಗಕ್ಕೂ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇವರು ನೀಡಿರುವ ಸಂವಿಧಾನ ಇಡೀ ದೇಶಕ್ಕೆ ಮಾದರಿಯಾಗಿದೆ. ಇದರ ಅಡಿಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ. ನಾವೆಲ್ಲರೂ ಬದುಕು ನಡೆಸುತ್ತಿದ್ದು, ಹಕ್ಕುಗಳನ್ನು ಪ್ರತಿಪಾದಿಸುತ್ತಿದ್ದೇವೆ. ಹಾಗಾಗಿ ಅಂಬೇಡ್ಕರ್ ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಇವರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮುಖಂಡರಾದ ಸಿದ್ದರಾಜು, ಪ್ರಸಾದ್, ಚಿಕ್ಕಸ್ವಾಮಿ, ಸೋಮಣ್ಣ, ಗುರುಮೂರ್ತಿ, ಪ್ರಭು, ಪ್ರವೀಣ್ ಕುಮಾರ್, ಶಿವು, ಶರತ್, ವಿಲ್ಸನ್, ಪ್ರಶಾಂತ್, ಚಿನ್ನಸ್ವಾಮಿ, ಡಿ. ಕೆ ರಾಜು, ಗೋಪಾಲ್ ನಾಯಕ, ವಿಜಯ್ ಕುಮಾರ್, ವೆಂಕಟೇಶ್ ಇತರರಿದ್ದರು.