ಮಂಗಲ ಗ್ರಾಮದಲ್ಲಿ ಪಾರ್ವತಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆಯು ವಿಜೃಂಭಣೆಯಿಂದ ನೆರವೇರಿತು.
ಹನೂರು: ತಾಲೂಕಿನ ಮಂಗಲ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಪಾರ್ವತಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆಯು ದೇವರ ಗುಡ್ಡರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಕಳೆದ ವಾರದ ಹಿಂದೆ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮದ 10ಕ್ಕೂ ಹೆಚ್ಚು ದೇವರ ಗುಡ್ಡರು ಶ್ರೀಶೈಲಕ್ಕೆ ತೆರಳಿದ್ದು, ಶುಕ್ರವಾರ ಗ್ರಾಮಕ್ಕೆ ಆಗಮಿಸಿದರು. ಈ ವೇಳೆ ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. ರಾತ್ರಿ 9ರ ವೇಳೆಯಲ್ಲಿ ಗ್ರಾಮದ ಕೆರೆ ಏರಿಯ ಬಳಿ ವಿವಿಧ ಪುಷ್ಪಗಳಿಂದ ಸಿಂಗರಿಸಿದ ಪಾರ್ವತಿ ದೇವಿಯ ಉತ್ಸವ ಮೂರ್ತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಸತ್ತಿಗೆ, ಸೂರಿಪಾನಿ ಹಾಗೂ ವಾದ್ಯ ಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಈ ವೇಳೆ 2 ಬಸವ ಭಾಗಿಯಾಗಿ ಎಲ್ಲರ ಗಮನ ಸೆಳೆಯಿತು. ಮಹಿಳೆಯರು ಪಂಜಿನ ಸೇವೆಯನ್ನು ನೆರವೇರಿಸಿದರು. ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಗುಂಡಾಪುರ, ಆನಾಪುರ, ಕಣ್ಣೂರು, ಕಾಮಗೆರೆ, ಗುಂಡಾಪುರ ಭಕ್ತರು ನೆರೆದಿದ್ದರು.