ಕೊಳ್ಳೇಗಾಲ ಪ್ರವಾಸಿ ಮಂದಿರದ ಆವರಣದಲ್ಲಿರುವ ಸಿಐಡಿ ಅಧಿಕಾರಿಗಳ ವಾಹ ನಗಳು.  
ಚಾಮರಾಜನಗರ

ಕೊಳ್ಳೇಗಾಲದಲ್ಲಿ ಅರಣ್ಯ ಸಿಬ್ಬಂದಿ ವಿಚಾರಣೆ

ಪ್ರಮುಖ ಮುಖ್ಯಾಂಶಗಳು

  • ಹನೂರು ಶೂಟೌಟ್ ಪ್ರಕರಣದ ಸಿಐಡಿ ತನಿಖೆ ಚುರುಕು
ಕೊಳ್ಳೇಗಾಲ: ಹನೂರಿನ ಶೂಟೌಟ್ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳ ಹಾನಿ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಬುಧವಾರ ಅರಣ್ಯ ಸಿಬ್ಬಂದಿ ವಿಚಾರಣೆ ನಡೆಸಿದರು.
ಶೂಟೌಟ್‌ನಿಂದ ಮೂವರು ಮೃತಪಟ್ಟ ಪ್ರಕರಣವನ್ನು ಸರ್ಕಾರ ಗಭೀರವಾಗಿ ಪರಿಗಣಿಸಿ ತನಿಖೆಯನ್ನು ಸಿಐಡಿಗೆ ವಹಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಐದಾರು ದಿನಗಳಿಂದ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಸಿಐಡಿ ಡಿವೈಎಸ್‌ಪಿ ಜಾಗೀರ್‌ದಾರ್ ನೇತೃತ್ವದಲ್ಲಿ ಕಳ್ಳ ಬೇಟೆ ಶಿಬಿರಗಳ ಮೇಲೆ ಹಾಗೂ ಕಚೇರಿ, ವಾಹನ ದ್ವಂಸ ಪ್ರಕರಣ ತನಿಖೆ ನಡೆಯುತ್ತಿದೆ. ಅಂತೆಯೇ, ಡಿವೈಎಸ್‌ಪಿ ಮೇರಿ ಶೈಲಜಾ ನೇತೃತ್ವದಲ್ಲಿ ಶೂಟೌಟ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಎರಡು ಪ್ರತ್ಯೇಕ ತನಿಖೆಯಲ್ಲಿ ಇನ್‌ಸ್ಪೆಕ್ಟರ್, ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಎರಡು ದಿನಗಳಿಂದ ಕೊಳ್ಳೇಗಾಲ ಪ್ರವಾಸಿ ಮಂದಿರದಲ್ಲಿ ಅರಣ್ಯ ಅಧಿಕಾರಿಗಳ ಹನೂರು ಕಾವೇರಿ ವನ್ಯಜೀವಿ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ, ರಾತ್ರಿ ಗಸ್ತಿನ ವಾಚರ್‌ಗಳನ್ನು ವಿಚಾರಣೆಗೆ ಕರೆಸಿ ತನಿಖೆ ನಡೆಸುತ್ತಿದ್ದಾರೆ.