ಗುಂಡ್ಲುಪೇಟೆ ಶ್ರೀ ಮದ್ದಾನೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಶಾಲಾ ಸಂಸತ್ ಚುನಾವಣೆ ನಡೆಸಿದ ಸಂದರ್ಭ ವಿದ್ಯಾರ್ಥಿಗಳು ಮತ ಚಲಾಯಿಸಲು ಸಾಲುಗಟ್ಟಿ ನಿಂತಿರುವುದು. ಮುಖ್ಯ ಶಿಕ್ಷಕರಾದ ಎಂ.ಪ್ರಕಾಶ್, ಸೋಮಶೇಖರ್, ಶಿಕ್ಷಕರಾದ ಮಹೇಶಪ್ಪ, ರಾಜೇಶ್, ವಿಶ್ವನಾಥ್ ಭಾರದ್ವಾಜ್ ಇತರರು ಇದ್ದರು.  
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಶಾಲಾ ಸಂಸತ್ ಚುನಾವಣೆ

ಎ. ಆರ್. ರಘುರಾಮ
ಗುಂಡ್ಲುಪೇಟೆ : ಪಟ್ಟಣದ ಶ್ರೀ ಮದ್ದಾನೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2026-27 ನೇ ಸಾಲಿನ ಶಾಲಾ ಸಂಸತ್ ಚುನಾವಣೆ ಶನಿವಾರ ನೆರವೇರಿತು.
ಶಾಲಾ ಆವರಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಗೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಪ್ರಕಾಶ್ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಪ್ರಜಾಪ್ರಭುತ್ವದ ಮಹತ್ವ ಪಾಲನೆಗಾಗಿ ಎಲ್ಲರೂ ಮತದಾನದಲ್ಲಿ ಭಾಗವಹಿಸುವುದು ಮುಖ್ಯವಾಗುತ್ತದೆ ಎಂದರು.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಈ ದೃಷ್ಟಿಯಿಂದ ಮಕ್ಕಳಲ್ಲಿ ಚುನಾವಣೆ, ಮತದಾನ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಸಂಸತ್ ಚುನಾವಣೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಶಾಸಕಾಂಗ ವ್ಯವಸ್ಥೆ ಬಗ್ಗೆ ಅರಿವು ಮೂಡಿಸುವುದು ಈ ಚಟುವಟಿಕೆಯ ಧ್ಯೇಯವಾಗಿದೆ ಎಂದರು. ವಿದ್ಯಾರ್ಥಿಗಳು ಗುರುತಿನ ಪತ್ರ ತೋರಿಸಿ ಮತ ಚಲಾಯಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್, ಶಿಕ್ಷಕರಾದ ಮಹೇಶಪ್ಪ, ರಾಜೇಶ್, ವಿಶ್ವನಾಥ್ ಭಾರದ್ವಾಜ್, ಶಿವಪ್ರಕಾಶ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.