ಚಾಮರಾಜನಗರ ತಾಲೂಕಿನ ತಾಲೂಕಿನ ಪುಣಜನೂರು ಗ್ರಾಮದಲ್ಲಿ ಗಿರಿಜನ ಆಶ್ರಮ ಶಾಲೆಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡುವ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು. ಮಣಿ ನಾಯಕ, ಕುಮಾರ ನಾಯಕ, ಜಡೆಯಪ್ಪ, ಶಾಮೀರ್ ಪಾಷಾ, ವೀರಭದ್ರಪ್ಪ ಇತರರು ಹಾಜರಿದ್ದರು. 
ಚಾಮರಾಜನಗರ

ಪುಣಜನೂರಿನಲ್ಲಿ ಗಿರಿಜನ ಆಶ್ರಮ ಶಾಲೆ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ
  • ಗುಣಮಟ್ಟದ ಕಾಮಗಾರಿ ನಡೆಸಲು ಸೂಚನೆ
ಚಾಮರಾಜನಗರ: ತಾಲೂಕಿನ ಪುಣಜನೂರು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ 2 ಕೋಟಿ ರೂ. ಅನುದಾನದಲ್ಲಿ ಗಿರಿಜನ ಆಶ್ರಮ ಶಾಲೆಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡುವ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ನಂತರ ಅವರು ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಕೃಷಿ ವಿಜ್ಞಾನ ಕಾಲೇಜು, ಚಾಮರಾಜನಗರ ವಿಶ್ವ ವಿದ್ಯಾಲಯ ಸ್ಥಾಪನೆಯಾಗಿದೆ. ಉನ್ನತ ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ಜತೆಗೆ ಗಿರಿಜನರ ಮಕ್ಕಳ ಶಿಕ್ಷಣ ಆಶ್ರಮ ಶಾಲೆಗಳನ್ನು ಆರಂಭ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕುಡಿಯುವ ನೀರು, ಶಾಲಾ ಕೊಠಡಿ ನಿರ್ಮಾಣದಂತಹ ಮೂಲ ಸೌಕರ್ಯಗಳಿಗೆ ಒತ್ತು ನೀಡಲಾಗುತ್ತಿದೆ. ಗ್ರಾಮದಲ್ಲಿ ಮೂಲಸೌಕರ್ಯ ಸಮಸ್ಯೆ ಇದ್ದರೆ ತಕ್ಷಣ ಪರಿಹರಿಸಲು ಕ್ರಮವಹಿಸುವುದಾಗಿ ಭರವಸೆ ನೀಡಿದರು. ಪಿಎಸಿಸಿ ಅಧ್ಯಕ್ಷ ಮಣಿನಾಯಕ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಧ್ಯಕ್ಷ ಪಿ.ಕುಮಾರನಾಯಕ, ಗ್ರಾ.ಪಂ ಮಾಜಿ ಅಧ್ಯಕ್ಷರಾದ ಶಾಂತಮ್ಮ, ಶಾಮೀರ್ ಪಾಷಾ, ಸದಸ್ಯ ನಾಗನಾಯಕ, ಜಡೆಯಪ್ಪ, ಶಂಕರ್, ಗುತ್ತಿಗೆದಾರ ವೀರಭದ್ರಪ್ಪ, ಕಾರ್ತಿಕ್, ಬಸವಣ್ಣ, ಇಂಜಿನಿಯರ್ ಭೀಮ್‌ಸಾಗರ್ ಮತ್ತು ಇತರರು ಇದ್ದರು.